ರಾಜ್ಯ ಒಕ್ಕಲಿಗರ ಸಂಘಕ್ಕೆ ಡಿ.ಎನ್.ಬೆಟ್ಟೇಗೌಡ ಅಧ್ಯಕ್ಷ

Posted By:
Subscribe to Oneindia Kannada

ಬೆಂಗಳೂರು, ಜನವರಿ 18: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಎನ್.ಬೆಟ್ಟೇಗೌಡ ಆಯ್ಕೆಯಾಗಿದ್ದಾರೆ. ಪದಚ್ಯುತ ಅಧ್ಯಕ್ಷ ಅಪ್ಪಾಜಿಗೌಡ ಅವರು ಕಣದಿಂದ ಹಿಂದೆ ಸರಿದಿದ್ದರು. ಬಂಡಾ ಬಣದಲ್ಲಿ ಗುರುತಿಸಿಕೊಂಡಿದ್ದ ಡಾ.ಕೆ.ಮಹದೇವ್ ಬಣ ಬದಲಾಯಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಕಣಕ್ಕಿಳಿದಿದ್ದರು.

ಕೆ. ಆರ್ ರಸ್ತೆಯಲ್ಲಿರುವ ಒಕ್ಕಲಿಗರ ಸಂಘದಲ್ಲಿ ನಡೆದ ಮತದಾನದಲ್ಲಿ ಬೆಟ್ಟೇಗೌಡ ಅವರು ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಆ.ದೇವೇಗೌಡ, ಡಾ.ಬಿ.ಶಿವಲಿಂಗಯ್ಯ ಚುನಾಯಿತರಾದರು.[ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿ ಗೌಡ ಪದಚ್ಯುತಿ]

Bettegowda elected as president of Rajya Vokkaligara Sangha

ಪ್ರಧಾನ ಕಾರ್ಯದರ್ಶಿಯಾಗಿ ಟಿ.ಎನ್.ರಾಮಚಂದ್, ಖಜಾಂಚಿಯಾಗಿ ಎನ್.ರಮೇಶ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎ.ಪ್ರಸಾದ್ ಘೋಷಿಸಿದ್ದಾರೆ. ಒಕ್ಕಲಿಗರ ಸಂಘದ 35 ಮಂದಿ ಸದಸ್ಯರು ಮತ ಚಲಾಯಿಸಿದರು.

ಒಕ್ಕಲಿಗರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಅಪ್ಪಾಜಿ ಗೌಡ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯಕ್ಕೆ ಭಾರಿ ಬೆಂಬಲ ವ್ಯಕ್ತವಾಗಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ. ಅಪ್ಪಾಜಿ ಗೌಡ ಪದಚ್ಯುತಗೊಳಿಸಲಾಗಿತ್ತು. ಹೀಗಾಗಿ ಮತ್ತೊಮ್ಮೆ ಚುನಾವಣೆ ನಡೆಸಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bettegowda elected as president of Rajya Vokkaligara Sangha in the fresh election held today at Vokkaliga Sangha KR road, Bengaluru.Karnataka Vokkaliga Sangha's Board of directors recently moved no conifidence motion against then president Dr. Appaji Gowda.
Please Wait while comments are loading...