ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತ್ ಬಂದ್: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ಭಾರತ್ ಬಂದ್ ನಿಮಿತ್ತ ಸುರಕ್ಷತೆಯ ದೃಷ್ಟಿಯಿಂದ ರಾಜಧಾನಿ ಬೆಂಗಳೂರಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಕರ್ನಾಟಕ ಸರ್ಕಾರ ರಜೆ ಘೋಷಿಸಿದೆ.

ಇನ್ನುಳಿದ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ, ರಜೆ ಘೋಷಿಸುವ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

LIVE: ಇಂದು ಭಾರತ್ ಬಂದ್: ಎಲ್ಲೆಲ್ಲೂ ಬಿಗಿ ಬಂದೋಬಸ್ತ್ LIVE: ಇಂದು ಭಾರತ್ ಬಂದ್: ಎಲ್ಲೆಲ್ಲೂ ಬಿಗಿ ಬಂದೋಬಸ್ತ್

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ಇನ್ನಿತರ ಬಿಜೆಪಿ ವಿರೋಧ ಪಕ್ಷಗಳು ಸೆ.10, ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿವೆ.

Bharat Bandh: Karnataka government declares holiday for schools and colleges in Bengaluru

ಬಂದ್ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ಬಿಗಿಬಂದೋಬಸ್ತ್ ಆಯೋಜಿಸಲಾಗಿದ್ದು, ಸಾರ್ವಜನಿಕ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಪಕ್ಷವೇ ಬಂದ್ ಗೆ ಕರೆನೀಡಿರುವುದರಿಂದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಬಂದ್ ಬಿಸಿ ತಟ್ಟಲಿದೆ. ಆದ್ದರಿಂದ ಕರ್ನಾಟಕದಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ. ಉಳಿದಮಂತೆ ಟ್ಯಾಕ್ಸಿ, ಆಟೋ ಸೇವೆಗಳೂ ಲಭ್ಯವಿರುವುದಿಲ್ಲ.

ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?ಸೆ.10 ರಂದು ಭಾರತ ಬಂದ್, ಏನಿರುತ್ತೆ? ಏನಿರೋಲ್ಲ?

ನಮ್ಮ ಮೆಟ್ರೋ ಸೇವೆ ಎಂದಿನಂತೆ ಲಭ್ಯವಿದ್ದು, ಅಹಿತಕರ ಘಟನೆಗಳು ಸಂಭವಿಸಿದರೆ ಮೆಟ್ರೋ ಸಂಚಾರವೂ ಸ್ಥಗಿತಗೊಳ್ಳಬಹುದು.

English summary
Karnataka Government declares public holiday for tomorrow for schools and colleges in Bengaluru as a precautionary measure ahead of BharatBandh tomorrow.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X