ಬಿಜೆಪಿ ಹಿರಿಯ ನಾಯಕ ಬಿ.ಬಿ ಶಿವಪ್ಪ ವಿಧಿವಶ

Posted By:
Subscribe to Oneindia Kannada

ಬೆಂಗಳೂರು, ಜುಲೈ 31: ಬಿಜೆಪಿ ಹಿರಿಯ ನಾಯಕ ಬಿ.ಬಿ ಶಿವಪ್ಪ(89) ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಸುಗುಣ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರ ಇಚ್ಛೆಯಂತೆ ಅವರ ಅಂತಿಮ ಸಂಸ್ಕಾರವನ್ನು ಅವರ ಊರಾದ ಸಕಲೇಶಪುರದ ಕುಂಬಾರಹಳ್ಳಿಯ ಎಸ್ಟೇಟಿನಲ್ಲಿ ನೆರವೇರಿಸಲಾಗುತ್ತದೆ.

Bharatiya Janata Party Veteran leader B.B. Shivappa Passes Away

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಪಾರ್ಥೀವ ಶರೀರವನ್ನು ಇರಿಸಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಡುವ ಸಾಧ್ಯತೆಯಿದೆ. ಮಧ್ಯಾಹ್ನದ ವೇಳೆ ಸಕಲೇಶಪುರಕ್ಕೆ ಪಾರ್ಥೀವ ಶರೀರವನ್ನು ರವಾನಿಸಲಾಗುತ್ತದೆ.

ಬಿ.ಬಿ.ಶಿವಪ್ಪ ಅವರು ಸಕಲೇಶಪುರದಲ್ಲಿ 1994 ಮತ್ತು 1999ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

Bharatiya Janata Party Veteran leader B.B. Shivappa Passes Away

* 1980ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.
* 1989ರ ವಿಧಾನಸಭೆ ಚುನಾವಣೆಯಲ್ಲಿ ಸೋಮವಾರಪೇಟೆಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
* 1991ರ ಲೋಕಸಭೆ ಚುನಾವಣೆಯಲ್ಲಿ ಹಾಸನದಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.
* ಸತತ ಸೋಲುಗಳಿಂದ ಕಂಗೆಡದ ಬಿ.ಬಿ.ಶಿವಪ್ಪ ಅವರು ಪಕ್ಷ ಸಂಘಟಿಸಿ 1994ರಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.
*1999ರ ಚುನಾವಣೆಯಲ್ಲೂ ಸಕಲೇಶಪುರದಿಂದ ಮರು ಆಯ್ಕೆಯಾದರು. ಆದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಸಿಗದ ಕಾರಣ, ಬಂಡಾಯವೆದ್ದರು. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿ ಎಂಬ ಕಾರಣಕ್ಕೆ ಪಕ್ಷದಿಂದ ಅಮಾನತಾದರು.
Senior BJP Leader BB Shivappa Passed Away | Oneindia Kannada
Bharatiya Janata Party Veteran leader B.B. Shivappa Passes Away

* ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ 2004ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿ ಚುನಾವಣೆಗೆ ಸ್ಪರ್ಧಿಸಿದರೂ ಗೆಲುವು ಸಾಧಿಸಲಿಲ್ಲ.
* 2005ರಲ್ಲಿ ಮತ್ತೆ ಬಿಜೆಪಿ ಸೇರಿದರು. 2012ರಲ್ಲಿ ಬಿಎಸ್ ಯಡಿಯೂರಪ್ಪ ಪರ ಸರಣಿ ಆರೋಪ ಮಾಡಿ, ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದು ಚುರುಕು ಮುಟ್ಟಿಸಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Bharatiya Janata Party Veteran leader B.B. Shivappa passed away today at a private hospital. He was 89. He was hospitalised after he suffered a mild heart attack last week.
Please Wait while comments are loading...