ಬೆಂಗಳೂರು : ಮರ ಬಿದ್ದು ಬೈಕ್ ಸವಾರ ಸಾವು

Posted By:
Subscribe to Oneindia Kannada

ಬೆಂಗಳೂರು, ಜೂನ್ 27 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಸೋಮವಾರ ಮಧ್ಯಾಹ್ನ ಮಲ್ಲೇಶ್ವರಂನಲ್ಲಿ ಬೃಹತ್ ಮರ ಉರುಳಿ ಬಿದ್ದು, ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಮಲ್ಲೇಶ್ವರಂನ 18ನೇ ಕ್ರಾಸ್ ಸಮೀಪ ಸೋಮವಾರ ಮಧ್ಯಾಹ್ನ ಬೃಹತ್ ಮರ ಐ10 ಕಾರು ಮತ್ತು ಬೈಕ್ ಮೇಲೆ ಉರುಳಿ ಬಿದ್ದಿದೆ. ಇದರಿಂದಾಗಿ ಬೈಕ್ ಸವಾರ ಅಸಾವುಲ್ಲಾ ಷರೀಫ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. [ಸ್ಮಾರ್ಟ್ ಮಲ್ಲೇಶ್ವರಂಗೆ ನೀವು ಸಲಹೆ ನೀಡಬಹುದು]

rain

ಅಸಾವುಲ್ಲಾ ಷರೀಫ್ (45) ಕಲ್ಯಾಣ ನಗರದ ನಿವಾಸಿ ಎಂದು ತಿಳಿದುಬಂದಿದೆ. ಐ10 ಕಾರಿನ ಚಾಲಕರು ಗಾಯಗೊಂಡಿದ್ದು, ಕೆ.ಸಿ.ಜನರಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಮುಂಗಾರು ಮಳೆ ಎದುರಿಸಲು ನಮ್ಮ ಬೆಂಗಳೂರು ಸಿದ್ಧವೇ?]

ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು 12 ಗಂಟೆ ವೇಳೆಗೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದೆ. ಬನಶಂಕರಿ 3ನೇ ಹಂತ, ಬನಶಂಕರಿ, ಜಯನಗರ 7ನೇ ಬ್ಲಾಕ್, ಜಯನಗರ 3ನೇ ಬ್ಲಾಕ್, ಯಡಿಯೂರು ಮುಂತಾದ ಪ್ರದೇಶಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ.

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಮರ ಉರುಳಿ ಬಿದ್ದಿದ್ದು, ಸ್ಟೇಡಿಯಂ ಮುಂದೆ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥವಾಗಿದೆ. ರಾಜರಾಜೇಶ್ವರಿ ನಗರದಲ್ಲಿಯೂ ಬೃಹತ್ ಮರ ಉರುಳಿ ಬಿದ್ದಿದೆ.

ಟ್ರಾಫಿಕ್ ಜಾಮ್ : ಸುಮನಹಳ್ಳಿಯಲ್ಲಿ ಮರ ಬಿದ್ದ ಕಾರಣ ನಾಯಂಡಳ್ಳಿ-ಯಶವಂತಪುರ ರಿಂಗ್ ರೋಡ್‍ನಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ರಾಜಾಜಿನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಬ್ಯಾಟರಾಯನಪುರ ಕಬ್ಬನ್ ಪಾರ್ಕ್, ಮೆಜೆಸ್ಟಿಕ್ ಸುತ್ತ-ಮುತ್ತ ಟ್ರಾಫಿಕ್ ಜಾಮ್ ಉಂಟಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Monsoon claimed a life in Bengaluru. A large tree fell on a biker in Malleswaram 18th cross around 12.45 pm on Monday. Biker Asavulla Shariff killed on spot.
Please Wait while comments are loading...