ಯಾದಗಿರಿಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಕಾದಾಟ

Posted By: Nayana
Subscribe to Oneindia Kannada

ಯಾದಗಿರಿ, ನವೆಂಬರ್ 18 : ಜಿಲ್ಲೆಯ ಸುರಪುರ ನಗರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಶನಿವಾರ(ನ.18) ರಾಜಕೀಯ ದ್ವೇಷ ಹಾಗೂ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು ಹಲವರಿಗೆ ಗಾಯಗಳಾಗಿವೆ. ಸ್ಥಳಕ್ಕೆ ಎಸ್ ಪಿ ಯಡಾ ಮಾರ್ಡಿನ್ ಮಾರ್ಬನ್ಯಾಂಗ್ ಸೇರಿದಂತೆ ಹಲವು ಹಿರಿಯ ಅಧಿಕಾರು ದೌಡಾಯಿಸಿದ್ದಾರೆ. ಒಟ್ಟು 14 ಜನರ ಮೇಲೆ ದೂರು ದಾಖಲಾಗಿದ್ದು ಐದು ಮಂದಿಯನ್ನು ಬಂಧಿಸಲಾಗಿದೆ.

BJP-Congress workers clash in Surapura

ಮೂವರು ಮಂದಿಗೆ ಕಲ್ಲು ತೂರಾಟದ ವೇಳೆ ಗಾಯಗಳಾಗಿವೆ. ಸೂಕ್ತ ಪೊಲೀಸ್ ಬಂದೋಬಸ್ತ್ ನೀಡಿದ್ದು, ಹೆಚ್ಚುವರಿ ಪೊಲೀಸ್ ಪಡೆ ರವಾನಿಸಲಾಗಿದೆ. ಬಿ. ಮಾಲಕರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ ಉಭಯ ಪಕ್ಷಗಳ ಕಾರ್ಯಕರ್ತರಿಂದ ಗಲಭೆ ಸಂಭವಿಸಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Five workers were arrested in clash between BJP and Congress workers at Surapura town in Yadgiri after stone pelting on saturday

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ