ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಲಪಾಡ್ ಪ್ರಕರಣದಲ್ಲಿ ಪೊಲೀಸರಿಂದಲೇ ಸಾಕ್ಷ್ಯ ನಾಶ:ಆರ್.ಅಶೋಕ್

By Manjunatha
|
Google Oneindia Kannada News

ಬೆಂಗಳೂರು, ಫೆಬ್ರವರಿ 21: ಮೊಹಮ್ಮದ್ ನಲಪಾಡ್ ಪ್ರಕರಣದಲ್ಲಿ ಪೊಲೀಸರೇ ಸಾಕ್ಷ್ಯ ನಾಶ ಮಾಡಿದ್ದಾರೆಂಬ ಮಾಹಿತಿ ಇದೆ ಮಾಜಿ ಗೃಹ ಮಂತ್ರಿ ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೊಹಮ್ಮದ್ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸರೇ ಕೆಲವರು ಆರೋಪಿ ಪರ ನಿಂತಿದ್ದು, ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಆರೋಪಿಸಿದರು.

ಯುಬಿಸಿಟಿಯಲ್ಲಿ ನಡೆದದ್ದು ಪಕ್ಷಾತೀತ ರಂಗೀನ್ ಪಾರ್ಟಿ, ಆದ್ರೆ ಈಗ?ಯುಬಿಸಿಟಿಯಲ್ಲಿ ನಡೆದದ್ದು ಪಕ್ಷಾತೀತ ರಂಗೀನ್ ಪಾರ್ಟಿ, ಆದ್ರೆ ಈಗ?

ಆಸ್ಪತ್ರೆ ಮತ್ತು ಫರ್ಜಿ ಬಾರ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರೆ ಅಳಿಸಿ ಹಾಕಿರುವ ಬಗ್ಗೆ ಮಾಹಿತಿ ಇದೆ ಎಂದ ಅವರು, ಪೊಲೀಸರು ಕೂಡಲೇ ತಾವು ಇಲ್ಲಿಯವರೆಗೆ ವಶಪಡಿಸಿಕೊಂಡಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಆಗ್ರಹಿಸಿದರು.

BJP leader R.Ashok doubts police in Mohammad Nalapad case

ಹಲ್ಲೆ ಬಗ್ಗೆ ಮಾತನಾಡಿದ ಅವರು ಆರೋಪಿ ಮೊಹಮ್ಮದ್ ಮತ್ತು ಆತನ ಬಳಗ ಗಾಂಜಾ ಸೇವಿಸಿದ್ದರು ಎನಿಸುತ್ತದೆ ಹಾಗಾಗಿಯೇ ಈ ರೀತಿ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಗಾಂಜಾ ಮತ್ತಿನಲ್ಲಿದ್ದವರು ಮಾತ್ರ ಇಷ್ಟು ಭೀಕರವಾಗಿ ಹಲ್ಲೆ ಮಾಡಲು ಸಾಧ್ಯ ಎಂದು ಅವರು ಹೇಳಿದರು.

ಬಿಜೆಪಿಯ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಕೂಡ ಈ ಬಗ್ಗೆ ಮಾತನಾಡಿದ್ದು, ವಿದ್ವತ್‌ ಮೇಲೆ 19 ಜನ ಹಲ್ಲೆ ನಡೆಸಿದ್ದಾರೆ ಆದರೆ ಪೊಲೀಸರು 9 ಜನರನ್ನು ಮಾತ್ರ ಬಂಧಿಸಿದ್ದಾರೆ ಎಂದಿದ್ದಾರೆ.

ನಿಮ್ಮ ಜನಪ್ರತಿನಿಧಿ: ಉದ್ಯಮಿ ನಲಪಾಡ್ ಅಹ್ಮದ್ ಹ್ಯಾರೀಸ್ನಿಮ್ಮ ಜನಪ್ರತಿನಿಧಿ: ಉದ್ಯಮಿ ನಲಪಾಡ್ ಅಹ್ಮದ್ ಹ್ಯಾರೀಸ್

ಪೊಲೀಸರು ಬೇಕೆಂದೆ ಈ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರುತ್ತಿದ್ದು, ದೂರು ದಾಖಲಿಸಿಕೊಳ್ಳಲು ಸಹ ವಿಳಂಬ ಮಾಡಿದ್ದರು, ಅಷ್ಟೆ ಅಲ್ಲದೆ ಆತನನ್ನು ಬಂಧಿಸಿದೆ ಆತನೇ ನ್ಯಾಯಾಲಯಕ್ಕೆ ಶರಣಾಗುವಂತೆ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ ಎಂದಿದ್ದಾರೆ.

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸವಾಲ್ ಹಾಕಿದ ಈಶ್ವರಪ್ಪ ಅವರು 'ಗೃಹ ಸಚಿವರು ಈ ಕೂಡಲೇ ಪ್ರಕರಣದಲ್ಲಿ ಶಾಮೀಲಾಗಿರುವ ಎಲ್ಲರ ಹೆಸರನ್ನು ಅವರ ಹಿನ್ನೆಲೆಯನ್ನು ಬಹಿರಂಗಪಡಿಸಬೇಕು' ಎಂದರು.

English summary
BJP leader R.Ashok express his doubts that police may destroy witness against Mohammad Nalapad. another BJP leader KS Eeshwarappa said that Vidvath was assault by 15 members but only 9 was arrested.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X