ಅಪೊಲೋ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ದಾಖಲು

Posted By:
Subscribe to Oneindia Kannada
   ಆಸ್ಪತ್ರೆಯಿಂದ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ | Oneindia Kannada

   ಬೆಂಗಳೂರು, ಅಕ್ಟೋಬರ್ 19: ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ(74) ಅವರು ಗುರುವಾರ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಹೋಗುವ ಸಾಧ್ಯತೆಯಿದೆ.

   ಇನ್ನೆರಡು ದಿನ ಯಡಿಯೂರಪ್ಪ ಅವರಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ

   ಜ್ವರ, ನೆಗಡಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದ ಯಡಿಯೂರಪ್ಪ ಅವರನ್ನು ಬುಧವಾರ ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

   BJP President BS Yeddyurappa discharged from Apollo Hospital

   ಹವಾಮಾನ ವೈಪರಿತ್ಯದಿಂದ ಯಡಿಯೂರಪ್ಪ ಅವರಿಗೆ ಜ್ವರ, ನೆಗಡಿ ಸಮಸ್ಯೆ ಕಾಣಿಸಿಕೊಂಡಿತ್ತು. ಕೊಂಚ ರಕ್ತದೊತ್ತಡ ಕೂಡ ಹೆಚ್ಚಾಗಿತ್ತು. ಒಂದು ದಿನ ಆಸ್ಪತ್ರೆಯಲ್ಲಿ ಇರಿಸಿಕೊಂಡು ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.

   ಯಡಿಯೂರಪ್ಪ ಅವರನ್ನು ಗುರುವಾರ ಆಸ್ಪತ್ರೆಯಿಂದ ಡಿಸ್‌ ಚಾರ್ಜ್ ಮಾಡಿದರೂ, ಕೆಲ ದಿನ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದು ಡಾ. ಪ್ರಮೋದ್ ತಿಳಿಸಿದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   BJP President BS Yeddyurappa discharged from Apollo Hospital today (Oct 19). He was admitted to hospital with complaint of High fever, Blood pressure. Doctors advice him to take rest.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ