ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಟ್ರೋ ಕಾಮಗಾರಿ ವೇಳೆ ಪರಿಸರಕ್ಕೆ ಧಕ್ಕೆ ಇಲ್ಲ: ಬಿಎಂಆರ್‌ಸಿಎಲ್ ಸ್ಪಷ್ಟನೆ

By Nayana
|
Google Oneindia Kannada News

ಬೆಂಗಳೂರು, ಜೂನ್ 12: ಮೆಟ್ರೋ ನಿಗಮವು ನಮ್ಮ ಮೆಟ್ರೋ ಕಾಮಗಾರಿ ವೇಳೆ ಪರಿಸರಕ್ಕೆ ಧಕ್ಕೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟನೆ ನೀಡಿದೆ.

ವೈಟ್‌ಫೀಲ್ಡ್ ಬಳಿ ನಮ್ಮ ಮೆಟ್ರೋ ಕಾಮಗಾರಿ ನಡೆದಿರುವ ಸ್ಥಳದಲ್ಲಿ ಭಾರಿ ಪ್ರಮಾಣದ ಧೂಳು ಉಂಟಾಗಿ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸ್ಪಷ್ಟನೆ ನೀಡಿರುವ ಬಿಎಂಆರ್‌ಸಿಎಲ್ ನಮ್ಮ ಮೆಟ್ರೋದ ಯಾವುದೇ ಕಾಮಗಾರಿಯನ್ನು ಗುತ್ತಿಗೆ ನೀಡುವ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಷರತ್ತನ್ನು ವಿಧಿಸಿಯೇ ಗುತ್ತಿಗೆ ನೀಡಲಾಗುತ್ತಿದೆ.

ನಮ್ಮ ಮೆಟ್ರೋ ನೌಕರರ ಮುಷ್ಕರಕ್ಕೆ ಮತ್ತೆ ಬ್ರೇಕ್ನಮ್ಮ ಮೆಟ್ರೋ ನೌಕರರ ಮುಷ್ಕರಕ್ಕೆ ಮತ್ತೆ ಬ್ರೇಕ್

ಕಾಮಗಾರಿ ನಡೆಯುವ ಸ್ಥಳದಲ್ಲಿ ಪರಿಸರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಮೆಟ್ರೋ ಖಾಸಗಿ ಸಂಸ್ಥೆಯಿಂದ ನೆಕ್ಸಸ್‌ ಟೆಸ್ಟ್‌ ಲ್ಯಾಬ್ ಮೂರನೇ ಏಜೆನ್ಸಿ ಮೂಲಕ ತಪಾಸಣೆಯನ್ನು ನಡೆಸಿ ವರದಿಯನ್ನು ಪಡೆದುಕೊಳ್ಳಲಾಗುತ್ತದೆ.

BMRCL clarified good Environment is our priority

ಹೀಗಾಗಿ ನಮ್ಮ ಮೆಟ್ರೋ ಕಾಮಗಾರಿ ನಡೆಯುವ ಸ್ಥಳದಲ್ಲಿ ಮಾಲಿನ್ಯ ಉಂಟಾಗದಂತೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ವೈಟ್‌ಫೀಲ್ಡ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಭೂಮಿಯನ್ನು ಅಗೆಯಬೇಕಾಗಿರುವದರಿಂದ ಕೆಲ ಸಮಯ ಧೂಳು ಉಂಟಾಗಿರುವುದು ನಿಜ ಆದರೆ ಸುತ್ತಮುತ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಬಳಿಕವೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

English summary
BMRCL said it has taken measures to minimize environmental pollution during construction. Safety, health and environment are priorities in the contract. A monitoring team has been formed by the contractor and BMRCL to monitor it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X