ಐಟಿ ಉದ್ಯೋಗಿಗಳನ್ನು ಸೆಳೆಯಲು ಮುಂದಾದ ಬಿಎಂಟಿಸಿ

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 15 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಐಟಿ ಉದ್ಯೋಗಿಗಳನ್ನು ಸೆಳೆಯಲು ಮುಂದಾಗಿದೆ. ಇದಕ್ಕಾಗಿ ಪ್ರತ್ಯೇಕವಾದ ತಂಡವೊಂದನ್ನು ರಚನೆ ಮಾಡಿದೆ.

ಬೆಂಗಳೂರಿನ ರಸ್ತೆಗಿಳಿಯಲಿದೆ 'ಇಂದಿರಾ ಸಾರಿಗೆ' ಬಸ್

ನಗರದ ಹಲವು ಐಟಿ ಕಂಪನಿಗಳು ಖಾಸಗಿ ಟ್ರಾವೆಲ್ಸ್‌ಗಳ ಮೇಲೆ ಅವಲಂಬಿತವಾಗಿವೆ. ಇಂತಹ ಕಂಪನಿಗಳ ಜೊತೆ ಮಾತುಕತೆ ನಡೆಸಿ ಬಿಎಂಟಿಸಿ ಬಸ್ಸುಗಳನ್ನು ಬಳಸುವಂತೆ ಬಾಡಿಗೆಗೆ ಪಡೆಯುವಂತೆ ಮಾಡಲು ತಂಡ ರಚನೆ ಮಾಡಲಾಗಿದೆ.

BMTC formed marketing team to attract IT crowd

ಕಂಪನಿಗಳ ಜೊತೆ ಸಂಪರ್ಕ, ಮಾತುಕತೆ ಹೀಗೆ ವಿವಿಧ ಕೆಲಸಗಳನ್ನು ನಿರ್ವಹಣೆ ಮಾಡಲು ಪ್ರತ್ಯೇಕ ತಂಡ ರಚನೆ ಮಾಡಲಾಗಿದೆ. ಈಗಾಗಲೇ ತಂಡ ಹಲವು ಕಂಪನಿಗಳ ಜೊತೆ ಚರ್ಚೆ ನಡೆಸುತ್ತಿದ್ದು, ಉತ್ತಮ ಪ್ರತಿಕ್ರಿಯೆಯೂ ಸಿಕ್ಕಿದೆ.

ಬೆಂಗಳೂರಿನ ರಸ್ತೆಗಿಳಿಯಲಿದೆ ದೇಶದ ಮೊಟ್ಟಮೊದಲ ಎಲೆಕ್ಟ್ರಿಕ್ ಬಸ್

ಸದ್ಯ, 15 ಕಂಪನಿಗಳು ಮತ್ತು ಕೆಲವು ಟೆಕ್ ಪಾರ್ಕ್‌ಗಳು ಬಿಎಂಟಿಸಿ ಬಸ್ಸುಗಳನ್ನು ಬಾಡಿಗೆಗೆ ಪಡೆದಿವೆ. 227 ಎಸಿ ಬಸ್ ಸೇರಿದಂತೆ 791 ಬಸ್ಸುಗಳನ್ನು ಬಿಎಂಟಿಸಿ ಈಗಾಗಲೇ ಬಾಡಿಗೆಗೆ ನೀಡಿದೆ.

ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ನಾವು ಪ್ರತ್ಯೇಕ ತಂಡ ರಚನೆ ಮಾಡಿದ್ದೇವೆ. ಐಟಿ ಕಂಪನಿಗಳ ಜೊತೆ ಅವರು ಮಾತುಕತೆ ನಡೆಸಲಿದ್ದಾರೆ. ತಂಡಕ್ಕೆ ಅಗತ್ಯವಿರುವ ವಾಹನ ಸೇರಿದಂತೆ ಅಗತ್ಯ ಸೌಲಭ್ಯ ನೀಡಲಾಗಿದೆ' ಎಂದು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
To encourage the Bengaluru IT population to use public transport Bangalore Metropolitan Transport Corporation (BMTC) has formed a marketing team. Team will reach out to companies and convince them to use city buses for their employees.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ