810 ಹೊಸ ಬಸ್ ಖರೀದಿಗೆ ಮುಂದಾದ ಬಿಎಂಟಿಸಿ
ಬೆಂಗಳೂರು, ಜೂನ್ 4 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 810 ಹೊಸ ಬಸ್ಸುಗಳನ್ನು ಖರೀದಿ ಮಾಡಲು ಸಿದ್ಧತೆ ನಡೆಸಿದೆ. ಜವಾಹರ್ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಯಡಿ ಈ ಬಸ್ಸುಗಳನ್ನು ಖರೀದಿಸಲಾಗುತ್ತಿದ್ದು, ಇವುಗಳಲ್ಲಿ ಎಸಿ ಮತ್ತು ಸಾಮಾನ್ಯ ಬಸ್ ಗಳು ಸೇರಿವೆ.
ಬೆಂಗಳೂರಿನಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಈ ಕುರಿತು ಮಾಹಿತಿ ನೀಡಿದ್ದು, ಬಿಎಂಟಿಸಿಗೆ 810 ಮತ್ತು ಕೆಎಸ್ಆರ್ ಟಿಸಿಗೆ 1,200 ಬಸ್ಸುಗಳನ್ನು ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಬಿಎಂಟಿಸಿ 500 ಬಸ್ಸುಗಳನ್ನು ಖರೀದಿಸಲು ಕೇಂದ್ರ ಸರ್ಕಾದ ಒಪ್ಪಿಗೆಗಾಗಿ ಕಾದು ಕುಳಿತಿದೆ.

ಬಿಎಂಟಿಸಿ ಖರೀದಿಸಲಿರುವ ನೂತನ 810 ಬಸ್ಸುಗಳಲ್ಲಿ 500 ಸಾಮಾನ್ಯ ಬಸ್ಸುಗಳಾಗಿದ್ದು, 310 ಎಸಿ ಬಸ್ಸುಗಳಾಗಿವೆ. ಜವಾಹರ್ಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಯೋಜನೆಯಡಿ ಈ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ. [250 ರೂ.ನೀಡಿ, ಬೆಂಗಳೂರು ನೋಡಿ]
ನೂತನವಾಗಿ ಖರೀದಿ ಮಾಡಲಾದ 500 ಬಸ್ಸುಗಳನ್ನು ಹಳೆಯ ಬಸ್ಸುಗಳು ಸಂಚರಿಸುವ ಮಾರ್ಗದಲ್ಲಿ ಓಡಿಸಲು ಚಿಂತನೆ ನಡೆಸಲಾಗಿದೆ. ಉಳಿದ ಬಸ್ಸುಗಳಲ್ಲಿ ನೂತನ ಮಾರ್ಗ ಬಸ್ಸುಗಳ ಸಂಖ್ಯೆ ಕಡಿಮೆ ಇರುವ ಮಾರ್ಗದಲ್ಲಿ ಓಡಿಸಲಾಗುತ್ತದೆ. [ಎರಡು ಹೊಸ ಮಾರ್ಗದಲ್ಲಿ ವಜ್ರ ಬಸ್ ಸೇವೆ]
ಕೇಂದ್ರ ಸರ್ಕಾರ ನೂತನ ಬಸ್ಸುಗಳ ಖರೀದಿಗಾಗಿ ಶೇ 35ರಷ್ಟು ಅನುದಾನ ನೀಡಲಿದೆ. ಶೇ 15ರಷ್ಟು ಅನುದಾನ ರಾಜ್ಯಸರ್ಕಾರದಿಂದ ಉಳಿದ 50 ರಷ್ಟು ಅನುದಾನದ ಪಾಲು ಬಿಎಂಟಿಸಿ ಸಂಸ್ಥೆಯದ್ದಾಗಿದೆ. 310 ಎಸಿ ಬಸ್ಸುಗಳನ್ನು ಖರೀದಿ ಮಾಡಲು ಈಗಾಗಲೇ ಒಪ್ಪಿಗೆ ದೊರಕಿದ್ದು, ಸದ್ಯದಲ್ಲೇ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications