ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷಾಚರಣೆ: ಡಿ.31ರ ತಡರಾತ್ರಿವರೆಗೂ ಬಿಎಂಟಿಸಿ ಬಸ್ ಸೇವೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷ ಆಚರಣೆಗೆ ಇನ್ನೂ ಎರಡೇ ದಿನಗಳು ಬಾಕಿ ಉಳಿದಿವೆ. ಡಿಸೆಂಬರ್ 31ರಂದು ತಡರಾತ್ರಿವರೆಗೂ ಬಿಎಂಟಿಸಿ ಸೇವೆ ನೀಡಲು ಮುಂದಾಗಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ಎಂಜಿ ರಸ್ತೆಯಲಲ್ಇ ನಡೆಯುವ ಹೊಸ ವರ್ಷಾಚರಣೆಗೆ ಪಾಲ್ಗೊಳ್ಳುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಗ್ 10 ಮಾರ್ಗದಲ್ಲಿ ಸಂಚರಿಸುವ ಬಸ್ ಸೇವೆಯನ್ನು ಡಿ.31ರ ತಡರಾತ್ರಿವರೆಗೂ ಬಿಎಂಟಿಸಿ ವಿಸ್ತರಿಸಿದೆ.

BMTC will provide midnight service during Newyear celebration

31ರ ರಾತ್ರಿ 11.30ರಿಂದ ಜನವರಿ 1 ಮಧ್ಯರಾತ್ರಿ 2 ಗಂಟೆಯವರೆಗೂ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂಜಿ ರಸ್ತೆ, ಸರ್ಜಾಪುರ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ, ಕಾಡುಗೋಡಿ, ಬನ್ನೇರುಘಟ್ಟ ರಸ್ತೆ, ಕೆಂಗೇರಿ, ಜನಪ್ರಿಯ ಟೌನ್‌ಶಿಪ್, ನೆಲಮಂಗಲ, ಯಲಹಂಕ ಉಪನಗರ, ಆರ್‌ಕೆ ಹೆಗಡೆ ನಗರ, ಬಾಗಲೂರು, ಮತ್ತು ಹೊಸಕೋಟೆವರೆಗೆ ಬಸ್‌ಗಳು ಸಂಚರಿಸಲಿವೆ. ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಬಸ್‌ಗಳು ಸಂಚರಿಸಲಿವೆ.

ಬಿಎಂಟಿಸಿ ಬಸ್ ಡಿಕ್ಕಿ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು
ಸಂಪಿಗೆ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣದಿಂದ ಶಿವಾಜಿನಗರ ಹಾಗೂ ಕೆಂಪೇಗೌಡ ಬಸ್‌ ನಿಲ್ದಾಣಕ್ಕೆ ಪ್ರಯಾಣಿಕರ ಸಂಖ್ಯೆಯನ್ನಾಧರಿಸಿ ಬಸ್ ಸಂಚಾರಕ್ಕೆ ನಿರ್ಧರಿಸಲಾಗಿದೆ.

English summary
BMTC has decided to provide misnight bus sevices during new year celebration till 2 Am at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X