ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್

Posted By:
Subscribe to Oneindia Kannada

ಬೆಂಗಳೂರು, ಜುಲೈ 09 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಬಸ್ ಓಡಿಸಲು ಮುಂದಾಗಿದೆ. ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ನಗರದ ವಿವಿಧ ಪ್ರದೇಶಗಳಿಂದ ಆಗಸ್ಟ್‌ನಲ್ಲಿ ಹೆಚ್ಚುವರಿ ಬಸ್ಸುಗಳು ಸಂಚಾರ ಆರಂಭಿಸಲಿವೆ.

ಸದ್ಯ, ನಗರದ 9 ವಿವಿಧ ಪ್ರದೇಶಗಳಿಂದ ವಿಮಾನ ನಿಲ್ದಾಣಕ್ಕೆ 70 ವಾಯು ವಜ್ರ ಬಸ್ಸುಗಳು ಸಂಚಾರ ನಡೆಸುತ್ತಿವೆ. ಸುಮಾರು 480 ಟ್ರಿಪ್‌ಗಳಲ್ಲಿ ಬಸ್ಸುಗಳು ಸಂಚಾರ ನಡೆಸುತ್ತಿವೆ. ಆದರೆ, ಬೇಡಿಕೆ ಹೆಚ್ಚಾಗುತ್ತಿರುವುದರಿಂದ 10 ಹೆಚ್ಚುವರಿ ಬಸ್ ಸಂಚಾರ ಆರಂಭಿಸಲು ನಿರ್ಧರಿಸಲಾಗಿದೆ. [ಬಿಎಂಟಿಸಿ ಬಸ್ಸುಗಳ ಪ್ರಯಾಣ ದರ ಹೆಚ್ಚಳ]

bmtc

ಐಟಿ ಕಂಪನಿಗಳು ಹೆಚ್ಚಾಗಿರುವ ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ವಿವಿಧ ಪ್ರದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬಸ್ ಸೌಲಭ್ಯ ಬೇಕು ಎಂಬ ಬೇಡಿಕೆ ಬಂದಿದೆ. ಬೇಡಿಕೆಗೆ ಸ್ಪಂದಿಸಿರುವ ಬಿಎಂಟಿಸಿ, ಆಗಸ್ಟ್‌ನಿಂದ ಬಸ್ ಸಂಚಾರ ಆರಂಭಿಸಲಿದೆ. [ವೊಲ್ವೋ ಪಾಸ್ ದರ ಹೆಚ್ಚಳ]

ಬಸ್ಸುಗಳಿಗೆ ಪೈಪೋಟಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒದಗಿಸುವ ಸೇವೆಯಲ್ಲಿ ಬಿಎಂಟಿಸಿ ಭಾರೀ ಪೈಪೋಟಿ ಎದುರಿಸುತ್ತಿದೆ. ಓಲಾ ಮತ್ತು ಊಬರ್ ಟ್ಯಾಕ್ಸಿಗಳು ದರ ಸಮರದ ಮೂಲಕ ಬಸ್ಸುಗಳಿಗೆ ಪೈಪೋಟಿ ನೀಡುತ್ತಿವೆ. [ಬೆಂಗಳೂರು ಸಾರ್ವಜನಿಕ ಸಾರಿಗೆ ಎಲ್ಲ ಮಾಹಿತಿ ಅಂಗೈನಲ್ಲಿ]

ಮತ್ತೊಂದು ಕಡೆ ಖಾಸಗಿ ಟ್ಯಾಕ್ಸಿಗಳು, ಖಾಸಗಿ ಮಿನಿ ಬಸ್ಸುಗಳು ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರನ್ನು ಸೆಳೆಯುತ್ತಿವೆ. ಪ್ರತಿನಿತ್ಯ 130 ಸಾಮಾನ್ಯ ಬಸ್ ಮತ್ತು 70 ಹವಾನಿಯಂತ್ರಿತ ಬಸ್ಸುಗಳು ವಿಮಾನ ನಿಲ್ದಾಣಕ್ಕೆ ಸಂಚಾರ ನಡೆಸುತ್ತಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangalore Metropolitan Transport Corporation (BMTC) will add 10 more buses to its service to Kempegowda International Airport (KIA) in the month of August 2016. Now BMTC operates over 70 Vayu Vajra buses to KIA.
Please Wait while comments are loading...