ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಯನಗರ ಚುನಾವಣೆ : ನಾಮಪತ್ರ ಸಲ್ಲಿಸಿದ ಬಿ.ಎನ್.ಪ್ರಹ್ಲಾದ್

By Gururaj
|
Google Oneindia Kannada News

ಬೆಂಗಳೂರು, ಮೇ 25 : ಬೆಂಗಳೂರಿನ ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ನಾಮಪತ್ರವನ್ನು ಸಲ್ಲಿಸಿದರು. ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಜೂನ್ 16ರಂದು ಫಲಿತಾಂಶ ಪ್ರಕಟವಾಗಲಿದೆ.

ಜಯನಗರದ ಅಭ್ಯರ್ಥಿ ಘೋಷಣೆ : ಬಿಜೆಪಿಯಲ್ಲಿ ಅಸಮಾಧಾನ! ಜಯನಗರದ ಅಭ್ಯರ್ಥಿ ಘೋಷಣೆ : ಬಿಜೆಪಿಯಲ್ಲಿ ಅಸಮಾಧಾನ!

ಶುಕ್ರವಾರ ಬಿ.ಎನ್.ಪ್ರಹ್ಲಾದ್ ಅವರು ಕೇಂದ್ರ ಸಚಿವ ಅನಂತ್ ಕುಮಾರ್, ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಮುಂತಾದ ನಾಯಕರ ಜೊತೆ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು.

ಜಯನಗರಕ್ಕೆ ವಿಜಯಕುಮಾರ್ ಸಹೋದರ ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿಜಯನಗರಕ್ಕೆ ವಿಜಯಕುಮಾರ್ ಸಹೋದರ ಪ್ರಹ್ಲಾದ್ ಬಾಬು ಬಿಜೆಪಿ ಅಭ್ಯರ್ಥಿ

BN Prahlad files nomination from Jayanagar

ಜಯನಗರದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎನ್.ವಿಜಯ್ ಕುಮಾರ್ ಅವರ ನಿಧನದಿಂದಾಗಿ ಜಯನಗರ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು. ವಿಜಯ್ ಕುಮಾರ್ ಅವರ ಸಹೋದರ ಬಿ.ಎನ್.ಪ್ರಹ್ಲಾದ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಜೂನ್ 11ರಂದು ಜಯನಗರ ಕ್ಷೇತ್ರದ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನಿಂದ ಸೌಮ್ಯಾ ರೆಡ್ಡಿ, ಜೆಡಿಎಸ್‌ನಿಂದ ಕಾಳೇಗೌಡ, ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ಅವರು ಚುನಾವಣಾ ಕಣದಲ್ಲಿದ್ದಾರೆ.

ಜಯನಗರ, ಆರ್.ಆರ್.ನಗರದಲ್ಲೂ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ!ಜಯನಗರ, ಆರ್.ಆರ್.ನಗರದಲ್ಲೂ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ!

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆಯುತ್ತಿರುವ ಚುನಾವಣೆ ಇದಾಗಿದೆ. ಯಾವ ಪಕ್ಷದ ಅಭ್ಯರ್ಥಿ ಗೆಲ್ಲುತ್ತಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

 Jayanagar

ಮೇ 12ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ, ಜಯನಗರ ಕ್ಷೇತ್ರದ ಚುನಾವಣೆ ನಡೆದಿಲಲ್ಲ. ರಾಜರಾಜೇಶ್ವರಿ ನಗರದಲ್ಲಿ ಮೇ 28ರಂದು ಚುನಾವಣೆ ನಡೆಯಲಿದ್ದು, ಮೇ 31ರಂದು ಫಲಿತಾಂಶ ಪ್ರಕಟವಾಗಲಿದೆ.

English summary
BJP candidate B.N.Prahlad filed his nomination from Jayanagar assembly constituency, Bengaluru for Karnataka assembly elections 2018. Elections will be held on June 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X