• search

ಬೆಂಗಳೂರು : ಗ್ಯಾಂಗ್ ರೇಪ್ ಪ್ರಕರಣ ಮೂವರು ಶಂಕಿತರು ವಶಕ್ಕೆ

By ವಿಕಾಸ್ ನಂಜಪ್ಪ
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು, ಅಕ್ಟೋಬರ್ 06 : ಬೆಂಗಳೂರಿನಲ್ಲಿ ಕಾಲ್ ಸೆಂಟರ್ ಉದ್ಯೋಗಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ನೀಡಿದ ಮಾಹಿತಿ ಅನ್ವಯ ಶಂಕಿತರ ರೇಖಾಚಿತ್ರಗಳನ್ನು ಸಿದ್ಧಪಡಿಸಲಾಗಿದೆ.

    ಅಕ್ಟೋಬರ್ 3ರ ಶನಿವಾರ ರಾತ್ರಿ ಮಡಿವಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಕಾಲ್ ಸೆಂಟರ್ ಉದ್ಯೋಗಿ ಮೇಲೆ ಟೆಂಪೋ ಟ್ರಾವೆಲ್ಲರ್‌ನಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಆರೋಪಿಗಳನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. [ಕಾಲ್ ಸೆಂಟರ್ ಉದ್ಯೋಗಿ ಮೇಲೆ ಗ್ಯಾಂಗ್ ರೇಪ್]

    arrest

    ಪೊಲೀಸರ ಒಂದು ತಂಡ ಟಿಟಿ ವಾಹನದ ಹುಡುಕಾಟದಲ್ಲಿ ತೊಡಗಿದೆ.ವಾಹನದ ನೋಂದಣಿ ಸಂಖ್ಯೆಯ ಪತ್ತೆ ಕಾರ್ಯ ನಡೆಯುತ್ತಿದೆ. ಹಲವು ಟಿಟಿ ಚಾಲಕ ಮತ್ತು ಕ್ಲೀನರ್‌ಗಳ ವಿಚಾರಣೆಯನ್ನು ಪೊಲೀಸರು ನಡೆಸಿದ್ದಾರೆ. ಯುವತಿ ನೀಡಿದ ಮಾಹಿತಿ ಆಧಾರದ ಮೇಲೆ ಶಂಕಿತರ ರೇಖಾಚಿತ್ರವನ್ನು ರಚಿಸಲಾಗಿದೆ.

    ಮಂಗಳವಾರ ಬೆಳಗ್ಗೆ ಪೊಲೀಸರ ಒಂದು ತಂಡ ಮೂವರನ್ನು ಈ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಯುವತಿಯನ್ನು ಕುಟುಂಬದವರು ಮಧ್ಯಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ವಿಚಾರಣೆಗೆ ಕರೆದಾಗ ಆಗಮಿಸಿ ಸಹಕಾರ ನೀಡುವುದಾಗಿ ಯುವತಿ ಪೊಲೀಸರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    BPO employee gang-raped in Bengaluru : Special team have arrested three suspects on Tuesday, October 6. The police had formed three teams to nab the culprits.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more