ಮೋದಿ ಸಮಾವೇಶಕ್ಕೆ ಸ್ವಾಗತಿಸುತ್ತಿದೆ ಬಿಎಸ್ವೈ ಪೋಸ್ಟರ್!
ಬೆಂಗಳೂರು, ನ. 13 : ಮಾಜಿ ಮುಖ್ಯಮಂತ್ರಿ ಮತ್ತು ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಿಜೆಪಿಗೆ ಮರಳುವ ವಿಷಯ ಯಕ್ಷಪ್ರಶ್ನೆಯಾಗಿದೆ. ಆದರೆ, ಅವರು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದ್ದಾರೆ. ಸದ್ಯ ಮೋದಿ ಸಮಾವೇಶದ ಸ್ಥಳದಲ್ಲೂ ಯಡಿಯೂರಪ್ಪ ಪೋಸ್ಟರ್ ಜನರನ್ನು ಸ್ವಾಗತಿಸುತ್ತಿದೆ.
ನ.17ರ ಭಾನುವಾರ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಮಾವೇಶದ ಸುತ್ತ-ಮುತ್ತಲಿನ ಸ್ಥಳದಲ್ಲಿ ವಿವಿಧ ನಾಯಕರು ಪೋಸ್ಟರ್ ಗಳು ರಾರಾಜಿಸುತ್ತಿವೆ. ಅವುಗಳಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪೋಸ್ಟರ್ ಸಮಾವೇಶದ ಪ್ರವೇಶ ದ್ವಾರದ ಬಳಿಯೇ ಇದೆ.

ಶಾದಿ ಭಾಗ್ಯ ಯೋಜನೆ ವಿಸ್ತರಣೆ ಮತ್ತು ಎಪಿಎಲ್ ಕಾರ್ಡ್ದಾರರಿಗೂ ಪಡಿತರ ವಿತರಣೆ ಬೇಡಿಕೆ ಈಡೇರಿಸುವಂತೆ ಯಡಿಯೂರಪ್ಪ ನಡೆಸುತ್ತಿರುವ ಅಹೋರಾತ್ರ ಧರಣಿಯಲ್ಲಿ ಪಾಲ್ಗೊಳ್ಳಿ ಎಂದು ಕರೆ ನೀಡುತ್ತಿರುವ ಈ ಪೋಸ್ಟರ್ ಮೋದಿ ಸಮಾವೇಶದ ಪ್ರವೇಶ ದ್ವಾರದ ಬಳಿಯಲ್ಲಿಯೇ ಇದೆ. ಯಡಿಯೂರಪ್ಪ ಬಿಜೆಪಿಗೆ ಮರಳದಿದ್ದರೂ ನರೇಂದ್ರ ಮೋದಿ ಅವರಿಗೆ ಬೆಂಬಲ ಘೋಷಿಸಿದ್ದಾರೆ.
ಆದ್ದರಿಂದ ಯಡಿಯೂರಪ್ಪ ಅಭಿಮಾನಿಗಳು ನರೇಂದ್ರ ಮೋದಿ ಸಮಾವೇಶದ ಹೆಬ್ಬಾಗಿಲಲ್ಲಿ ಇಂತಹ ಪೋಸ್ಟರ್ ಹಾಕಿರಬಹುದು. ಆದರೆ, ಬಿಜೆಪಿ ನಾಯಕರು ಸಮಾವೇಶದ ದಿನ ಅದನ್ನು ಅಲ್ಲಿಂದ ತೆಗೆಯುತ್ತಾರೋ ಅಥವ ಹಾಗೆ ಉಳಿಸಿಕೊಳ್ಳುತ್ತಾರೋ ಎಂಬುದು ಪ್ರಮುಖ ಪ್ರಶ್ನೆಯಾಗಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿಜೆಪಿ ಮಾಜಿ ಶಾಸಕರೊಬ್ಬರು ಜನರಿಗೆ ದೀಪಾವಳಿ ಶುಭಾಶಯ ಸಲ್ಲಿಸಲು ಹಾಕಿದ್ದ ಪೋಸ್ಟರ್ ಗಳಲ್ಲಿಯೂ ಬಿಜೆಪಿ ನಾಯಕರ ಚಿತ್ರಗಳ ನಡುವೆ ಯಡಿಯೂರಪ್ಪ ಅವರ ಫೋಟೋ ಹಾಕಿದ್ದರು. ಅದಕ್ಕೂ ಮುನ್ನ ಗೋವಾದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯ ಸಂದರ್ಭದಲ್ಲಿಯೂ ಬಿಜೆಪಿ ನಾಯಕರ ಪೋಟೋ ಜೊತೆಗೆ ಯಡಿಯೂರಪ್ಪ ಫೋಟೋ ಕಾಣಿಸಿಕೊಂಡಿತ್ತು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications