ಮಾ.18ರಿಂದ ಬಜೆಟ್ ಅಧಿವೇಶನ, ವಿಧಾನಸೌಧದ ಸುತ್ತ ನಿಷೇಧಾಜ್ಞೆ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 14 : ವಿಧಾನಸೌಧದಲ್ಲಿ ಮಾರ್ಚ್ 18ರಿಂದ 31ರ ತನಕ ಬಜೆಟ್ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 18ರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2016-17ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್‌.ಎಸ್.ಮೇಘರಿಕ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಮಾರ್ಚ್ 18ರ ಬೆಳಗ್ಗೆ 6 ಗಂಟೆಯಿಂದ ಮಾ.31ರ ಮಧ್ಯರಾತ್ರಿ 12 ಗಂಟೆಯ ತನಕ ವಿಧಾನಸೌಧದ 2 ಕಿ.ಮೀ.ಸುತ್ತ-ಮುತ್ತ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಧಿವೇಶನ ನಡೆಯದೆ ಇರುವ ದಿನಗಳು ಮತ್ತು ಸಾರ್ವತ್ರಿಕ ರಜಾ ದಿನಗಳಂದು ನಿಷೇಧಾಜ್ಞೆ ಜಾರಿಯಲ್ಲಿರುವುದಿಲ್ಲ. [ಊಬ್ಲೋ ವಾಚ್ ಹಸ್ತಾಂತರಿಸಿದ ಸಿದ್ದರಾಮಯ್ಯ]

vidhana soudha

ಅಧಿವೇಶನದ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು, ದಲಿತ ಸಂಘಟನೆಗಳು, ವಿಧ್ಯಾರ್ಥಿ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. [ವಿಧಾನಸೌಧದಲ್ಲಿ ವೈಫೈ ಸೌಲಭ್ಯ ಕಲ್ಪಿಸಲು ಶಾಸಕರ ಮನವಿ]

ಪ್ರತಿಭಟನೆಯಿಂದಾಗಿ ಅಧಿವೇಶನದ ಕಾರ್ಯಕಲಾಪಗಳಿಗೆ ಹಾಗೂ ಕರ್ನಾಟಕ ಹೈಕೋರ್ಟ್, ಕಾರ್ಯಕಲಾಪಗಳಿಗೆ, ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದಲ್ಲಿರುವ ಆಡಳಿತ ಕಛೇರಿಗಳ ಕಾರ್ಯ ನಿರ್ವಹಣೆಗೆ ಅಡಚಣೆ ಉಂಟಾಗುವುದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. [ವಿಧಾನಸೌಧಕ್ಕೆ ಹೆಚ್ಚಿನ ಭದ್ರತೆ]

ಸೆಕ್ಷನ್ 144 ಅನ್ವಯ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವಂತಿಲ್ಲ. ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವಂತಿಲ್ಲ. ದೊಣ್ಣೆ, ಕತ್ತಿ, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ.

ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ. ಪ್ರಚೋದನೆ ನೀಡುವಂತಹ ಹೇಳಿಕೆಗಳನ್ನು ನೀಡುವಂತಿಲ್ಲ. ಬಹಿರಂಗ ಘೋಷಣೆ ಕೂಗುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರ ಬಿಡಿಸುವುದು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bengaluru city police will impose prohibitory orders within 2 kilometre radius of the Vidhana Soudha from March 18 th to 31st 2016 under section 144 of the CRPC. Chief Minister Siddaramaiah will table the state budget in the Karnataka Assembly on Friday, March 18th. The Budget Session will be held till March 31st.
Please Wait while comments are loading...