ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

286 ಕೋಟಿ ವೆಚ್ಚದಲ್ಲಿ ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನ

|
Google Oneindia Kannada News

ಬೆಂಗಳೂರು, ಜನವರಿ 01 : ತಿಪ್ಪಗೊಂಡನಹಳ್ಳಿ ಜಲಾಶಯ ಪುನಶ್ಚೇತನಗೊಳಿಸುವ ಕಾರ್ಯವನ್ನು ಬೆಂಗಳೂರು ಜಲಮಂಡಳಿ ಆರಂಭಿಸಲಿದೆ. ಎತ್ತಿನಹೊಳೆ ಯೋಜನೆಯ ನೀರನ್ನು ಜಲಾಶಯಕ್ಕೆ ಹರಿಸಲು ಜಲಮಂಡಳಿ ತೀರ್ಮಾನಿಸಿದೆ.

ತಿಪ್ಪಗೊಂಡನಹಳ್ಳಿ ಜಲಾಶಯ ಅಭಿವೃದ್ಧಿಗೆ 286 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. 2019ರ ಏಪ್ರಿಲ್‌ನಲ್ಲಿ ಕಾಮಗಾರಿಗೆ ಚಾಲನೆ ಸಿಗಲಿದೆ. ಜಲಾಶಯ 3.3 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಈಗ ಹೂಳು ತುಂಬಿದೆ.

ತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನ ಮಟ್ಟ 53 ಅಡಿಗೆ ಏರಿಕೆತಿಪ್ಪಗೊಂಡನಹಳ್ಳಿ ಜಲಾಶಯದ ನೀರಿನ ಮಟ್ಟ 53 ಅಡಿಗೆ ಏರಿಕೆ

ಒಂದು ಕಾಲದಲ್ಲಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು. ಹೂಳು ತುಂಬಿಕೊಂಡು ನೀರು ಕಲುಷಿತವಾಗಿದೆ ಎಂಬ ಕಾರಣಕ್ಕಾಗಿ ಜಲಾಶಯದ ನೀರಿನ ಬಳಕೆಯನ್ನು ನಿಲ್ಲಿಸಲಾಗಿದೆ.

ಭಾರೀ ಮಳೆಯಿಂದಾಗಿ ಹೆಸರಘಟ್ಟ ಕೆರೆಗೆ ಜೀವಕಳೆಭಾರೀ ಮಳೆಯಿಂದಾಗಿ ಹೆಸರಘಟ್ಟ ಕೆರೆಗೆ ಜೀವಕಳೆ

BWSSB to clean up Thippagondanahalli reservoir

ಕರ್ನಾಟಕ ಸರ್ಕಾರ ಎತ್ತಿನ ಹೊಳೆ ಯೋಜನೆಯ ನೀರನ್ನು ತಿಪ್ಪಗೊಂಡನಹಳ್ಳಿಗೆ ಹರಿಸುವುದಾಗಿ ಹೇಳಿದೆ. ಆದ್ದರಿಂದ, ಜಲಮಂಡಳಿ ಜಲಾಶಯವನ್ನು ಸ್ವಚ್ಛಗೊಳಿಸಲು ಮುಂದಾಗಿದೆ. ಈ ಜಲಾಶಯ ಶುದ್ಧಗೊಂಡು ನೀರು ಹರಿಸಿದರೆ, ಬೆಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ನಿರೀಕ್ಷೆ ಇದೆ.

ಕೆಆರ್‌ಎಸ್‌ , ಕಬಿನಿ ಜಲಾಶಯಗಳಿಂದ 3 ತಿಂಗಳಿಗಾಗುವಷ್ಟು ನೀರು ಲಭ್ಯಕೆಆರ್‌ಎಸ್‌ , ಕಬಿನಿ ಜಲಾಶಯಗಳಿಂದ 3 ತಿಂಗಳಿಗಾಗುವಷ್ಟು ನೀರು ಲಭ್ಯ

ಎತ್ತಿನಹೊಳೆ ಯೋಜನೆಯ ಮೂಲಕ ಬೆಂಗಳೂರಿಗೆ 2.5 ಟಿಎಂಸಿ ಅಡಿ ನೀರು ಸಿಗಲಿದೆ. ಈ ನೀರಿನಲ್ಲಿ 1.7 ಟಿಎಂಸಿ ನೀರನ್ನು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಪೂರೈಸಲು ತೀರ್ಮಾನಿಸಲಾಗಿದೆ. ಮೊದಲು ಹೂಳು ಎತ್ತಿ, ಅನಂತರ ನೀರು ಸಂಸ್ಕರಣೆ ಘಟಕ ಸ್ಥಾಪನೆ ಮಾಡಲಾಗುತ್ತದೆ. ಕೊಳಚೆ ನೀರು ಸಂಸ್ಕರಣೆ ಮಾಡಲು 22 ಕಿ.ಮೀ. ಪೈಪ್ ಲೈನ್ ಅಳವಡಿಕೆ ಮಾಡಲಾಗುತ್ತದೆ.

English summary
Bangalore Water Supply and Sewerage Board (BWSSB) will clean up Thippagondanahalli reservoir. 286 crore project will take up in the month of April.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X