ಬೆಂಗಳೂರಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕ್ಯಾಬ್ ಡ್ರೈವರ್

Posted By:
Subscribe to Oneindia Kannada

ನವೆಂಬರ್ 09, ಬೆಂಗಳೂರು : ನಗರದಲ್ಲಿ ಮತ್ತೆ ಕಾಮುಕರ ಅಟ್ಟಹಾಸ ತಲೆ ಎತ್ತಿದಂತಿದೆ. ಉತ್ತರ ಭಾರತ ಮೂಲದ ಯುವತಿಯೊಬ್ಬಳ ಮೇಲೆ ಕಾಮುಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನವೆಂಬರ್ 08ರ ಬುಧವಾರ ರಾತ್ರಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭದ್ರಾವತಿ ಮೂಲದ ಕ್ಯಾಬ್ ಚಾಲಕ ಶರತ್ ಎಂಬುವನು ನವೆಂಬರ್ 9ರ ಮಧ್ಯಾಹ್ನ ಯುವತಿಯ ಮನೆಗೆ ನುಗ್ಗಿ ಆಕೆಯ ಬಟ್ಟೆ ಹರಿದು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿಗೆ ರಾಡ್ ನಿಂದ ತಲೆಗೆ ಹೊಡೆದು ಹಲ್ಲೆ ಮಾಡಿ. ಕಟ್ಟಡದಿಂದ ಕೆಳಕ್ಕೆ ತಳ್ಳಿ ಕೊಲ್ಲಲು ಪ್ರಯತ್ನಿಸಿದ್ದಾನೆ.

Cab driver attempts to rape

ಯುವತಿಯ ಚೀರಾಟ ಕೇಳಿ ಸ್ಥಳಕ್ಕೆ ಆಗಮಿಸಿದ ನೆರೆ ಹೊರೆಯವರು ಶರತ್ ನನ್ನು ಹಿಡಿದು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕುಡಿದ ಅಮಲಿನಲ್ಲಿದ್ದ ಶರತ್ ನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ.

ಸಮಾಚಾರ ತಿಳಿದು ಊರಿನಿಂದ ಬಂದ ಯುವತಿಯ ಪೋಷಕರು ಓದು ಬಿಡಿಸಿ ಯುವತಿಯನ್ನು ಸ್ವಗ್ರಾಮಕ್ಕೆ ಕರೆದುಕೊಂಡು ಹೋಗಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
a cab driver attempts to rape a young girl in Somadevanahalli area. Neighbors rescued girl from cab driver Sharath. Somadevanahlli police arrested him.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ