ಬೆಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 12 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಅನ್ವಯ ನಿ‍‍‍ಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಈ ಕುರಿತು ಸೋಮವಾರ ಸಂಜೆ ಆದೇಶ ಹೊರಡಿಸಿದರು. ತಕ್ಷಣದಿಂದ ಜಾರಿಗೆ ಬರುವಂತೆ 17 ಗಂಟೆಗಳ ಅವಧಿಗೆ ಸಿಆರ್‌ಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಚಿತ್ರಗಳು : ಹಿಂಸಾಚಾರಕ್ಕೆ ತಿರುಗಿದ ಕಾವೇರಿ ಪ್ರತಿಭಟನೆ]

Cauvery dispute : Section 144 CrPC imposed in Bengaluru

ಬೆಂಗಳೂರಿನ ಮೈಸೂರು ರಸ್ತೆ, ಸುಂಕದಕಟ್ಟೆ, ನಾಯಂಡಹಳ್ಳಿ, ವಿಜಯನಗರ, ಹಂಪಿ ನಗರ, ಮಾಗಡಿ ರಸ್ತೆ, ಪೀಣ್ಯ ಮುಂತಾದ ಸ್ಥಳಗಳಲ್ಲಿ ತಮಿಳುನಾಡಿಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಬೆಂಗಳೂರಿನಲ್ಲಿರುವ ತಮಿಳರ ಪ್ರದೇಶಕ್ಕೆ ಬಿಗಿ ಭದ್ರತೆ]

15 ಸಾವಿರ ಪೊಲೀಸ್, 3 ಸಾವಿರ ಗೃಹ ರಕ್ಷಕ ದಳ, 270 ಚೀತಾ ವಾಹನಗಳನ್ನು ಬೆಂಗಳೂರಿನಲ್ಲಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ತೊಡಗಿದ್ದ 200ಕ್ಕೂ ಅಧಿಕ ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru police commissioner has imposed section 144 of the CrPC in Bengaluru city from 17 hours today.
Please Wait while comments are loading...