ಬೆಂಗಳೂರು ನಗರದಲ್ಲಿ ಸೆಕ್ಷನ್ 144ರ ಅಡಿ ನಿಷೇಧಾಜ್ಞೆ ಜಾರಿ

By: ಒನ್ಇಂಡಿಯಾ ಪ್ರತಿನಿಧಿ
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 27: ಮಂಗಳವಾರ ಮಧ್ಯಾಹ್ನ 2ಕ್ಕೆ ಸುಪ್ರೀಂ ಕೋರ್ಟ್ ಕಾವೇರಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕಾವೇರಿ ಕೊಳ್ಳದ ಜಿಲ್ಲೆಗಳಲ್ಲಿ 144ನೇ ಸೆಕ್ಷನ್ ನಿಷೇಧಾಜ್ಞೆ ಹೇರಲಾಗಿದೆ. ಇದರಿಂದ ಸಾಮಾನ್ಯ ಜೀವನಕ್ಕೆ ಏನೂ ತೊಂದರೆ ಇಲ್ಲ. ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ಬೆಂಗಳೂರು ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಬೆಂಗಳೂರು ಕಮಿಷನರ್ ಎನ್.ಮೇಘರಿಕ್, ಸುಪ್ರೀಂ ಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಶಾಂತಿ-ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.[ಸುಪ್ರೀಂ ವಿಚಾರಣೆ ಇಂದು: ನ್ಯಾಯಾಂಗ ನಿಂದನೆಯೋ ವಾದಕ್ಕೆ ಮನ್ನಣೆಯೋ?]

Megharik

ಡಿಸೆಂಬರ್ ನವರೆಗೆ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಕೈಗೊಂಡ ನಿರ್ಣಯದ ಬಗ್ಗೆ ಕೋರ್ಟ್ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂಬ ಬಗ್ಗೆಯೂ ಸದ್ಯಕ್ಕೆ ಕುತೂಹಲವಿದೆ. ನೀರು ಹರಿಸುವುದರಿಂದ ಕಾನೂನು ಸುವ್ಯವಸ್ಥೆ ಸಮಸ್ಯೆಯಾಗುತ್ತದೆ ಎಂದು ಕರ್ನಾಟಕ ಸರಕಾರ ತಿಳಿಸಿತ್ತು.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

ಈ ವಿಚಾರವಾಗಿ ಸುಪ್ರೀಂ ಕೋರ್ಟ್, ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಅಫಿಡವಿಟ್ ನಲ್ಲಿ ಈ ಅಂಶ ಕೈ ಬಿಡಲು ಕಾನೂನು ತಜ್ಞರ ತಂಡ ನಿರ್ಧರಿಸಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Supreme court hearing today on Cauvery issue. So, Bengaluru and the rest of the Cauvery basin, there is Section 144 Cr. PC or prohibitory orders in place. However, normal life will not be affected the police say as all arrangements have been made.
Please Wait while comments are loading...