ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾದಕವಸ್ತು ಮಾರಾಟ: ನೈಜೀರಿಯಾ ಪ್ರಜೆ ಬಂಧನ

|
Google Oneindia Kannada News

ಬೆಂಗಳೂರು, ಮಾರ್ಚ್ 24: ವೀಸಾ ನಿಯಮ ಉಲ್ಲಂಘಿಸಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ನೈಜೀರಿಯಾ ಪ್ರಜೆಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಆತನ ಬಳಿ ಇದ್ದ 2.50ಲಕ್ಷ ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಕ್ರಿಸ್ಟೋಫರ್ ಅಗ್ನೋಬನ್ (36) ಬಂಧಿತ ನೈಜೀರಿಯಾ ಪ್ರಜೆಯಾಗಿದ್ದು, ಈತನಿಂದ 25ಗ್ರಾಂ ಕೊಕೇನ್, ಎರಡು ಮೊಬೈಲ್, ಪಾಸ್‌ಪೋರ್ಟ್, ಬೈಕ್ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ

ಆರೋಪಿಯು ಭಾರತದಲ್ಲಿ ವಾಸ್ತವ್ಯ ಹೂಡಿ ವೀಸಾ ನಿಯಮ ಉಲ್ಲಂಘಿಸಿ ಮಾದಕ ವಸ್ತು ಮಾರಾಟ ದಲ್ಲಿ ತೊಡಗಿರುವುದು ಪ್ರಾಥಮಿಕ ತನಿಖೆ ವೇಳೆ ಬಹಿರಂಗಗೊಂಡಿದೆ. ಬೆಂಗಳೂರಿನ ಹೆಣ್ಣೂರು ವ್ಯಾಪ್ತಿಯ ರಾಜಣ್ಣ ಲೇಔಟ್, ಡಿಫೆನ್ಸ್ ಕಾಲೊನಿ, ಹೊರಮಾವು ಅಗರದ ಹೆಣ್ಣೂರಿನಲ್ಲಿ ಮನೆಯೊಂದು ಬಾಡಿಗೆಗೆ ಪಡೆದು ವಾಸವಾಗಿದ್ದ ಈತನ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

CCB police arrested Nigerian Rs3 lakh worth drugs recovered

ಆರೋಪಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

English summary
The city crime branch (CCB)is arrested Nigeria citizen Christopus Agnoban (36) in bengaluru. The christopus trying to sell drugs in college campus.police seized Rs.2.5 lakhs worth cocaine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X