ಬೆಂಗಳೂರಲ್ಲಿ ಛೋಟಾ ಶಕೀಲ್ ಸಹಚರನ ಬಂಧನ
ಬೆಂಗಳೂರು, ನವೆಂಬರ್ 18 : ಭೂಗತ ಪಾತಕಿ ಛೋಟಾ ಶಕೀಲ್ ಜೊತೆ ಸೇರಿ ದುಷ್ಕೃತ್ಯ ನಡೆಸಲು ಸಂಚು ರೂಪಿಸಿದ್ದ ಆತನ ಸಹಚರನನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಂಗಳೂರಿನ ಬಿಸ್ಮಿಲ್ಲಾ ನಗರದಲ್ಲಿ ವಾಸವಾಗಿದ್ದ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್ ಅವರು ಸಿಸಿಬಿ ಪೊಲೀಸರು ಸೈಯದ್ ನಿಯಾಮತ್ (28) ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಛೋಟಾ ಶಕೀಲ್ ಜೊತೆ ಸೈಯದ್ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಿದರು. [ರಾಜನ್ ಪಾಸ್ ಪೋರ್ಟ್ ಬಗ್ಗೆ ಮಂಡ್ಯದಲ್ಲಿ ತನಿಖೆ]

ಬಿಸ್ಮಿಲ್ಲಾ ನಗರದ 3ನೇ ಕ್ರಾಸ್ನಲ್ಲಿ ವಾಸವಾಗಿದ್ದ ಸೈಯದ್ ಛೋಟಾ ಶಕೀಲ್ ಸೂಚನೆಯಂತೆ ಇತರರೊಂದಿಗೆ ಸೇರಿ ನಗರದಲ್ಲಿ ಪ್ರಮುಖ ಮುಖಂಡರನ್ನು ಕೊಲೆ ಮಾಡಿ, ಆ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಲು ಒಳಸಂಚು ರೂಪಿಸಿದ್ದ. [ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ]
ಈ ಬಗ್ಗೆ ಖಚಿತವಾದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಬುಧವಾರ ದಾಳಿ ನಡೆಸಿ ಸೈಯದ್ನನ್ನು ಬಂಧಿಸಿದ್ದಾರೆ. ಸೈಯದ್ ಜೊತೆಗೆ ಇನ್ನು ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಅವರು ಸೈಯದ್ಗೆ ಸಹಕಾರ ನೀಡುತ್ತಿದ್ದರು ಎಂದು ತಿಳಿದುಬಂದಿದ್ದು, ತನಿಖೆ ನಡೆಯುತ್ತಿದೆ.

ಬಂಧಿತ ಸೈಯದ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಹಿಂದೆ ಕೊಲೆ ಪ್ರಕರಣದ ದಾಖಲಾಗಿತ್ತು. ಕೊಲೆ, ದರೋಡೆ ಸೇರಿದಂತೆ ಒಟ್ಟು 7 ಪ್ರಕರಣಗಳು ಈತನ ವಿರುದ್ಧ ದಾಖಲಾಗಿವೆ ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications