KFD ನಿಷೇಧಕ್ಕೆ ಸಿದ್ದರಾಮಯ್ಯ ಹಿಂದೇಟು: ಶೆಟ್ಟರ್ ಆರೋಪ

Posted By: Nayana
Subscribe to Oneindia Kannada

ಬೆಂಗಳೂರು, ಜನವರಿ 09: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಕೊಲೆಗಳು, ಅತ್ಯಾಚಾರ, ದರೋಡೆಗಳು ನಡೆಯುತ್ತಿದೆ ಇದಕ್ಕೆಲ್ಲ ಕೆಎಫ್ ಡಿ, ಪಿಎಫ್ ಐ ಸಮಾಜ ವಿರೋಧಿ ಸಂಘಟನೆಗಳು ರಾಜ್ಯದಲ್ಲಿ ಬೀಡುಬಿಟ್ಟಿರುವುದೇ ಕಾರಣ ಎಂದು ವಿರೋಧ ಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೇರಳ ಮಾದರಿಯಲ್ಲಿ ಅಪರಾಧಗಳು ನಡೆಯುತ್ತಿದೆ. ಬೆಂಗಳೂರು ಅತ್ಯಾಚಾರದ ನಗರವಾಗಿದೆ. ಒಟ್ಟಾರೆ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಕೆಎಫ್ ಡಿ, ಪಿಎಫ್ ಐ, ಸಂಘಟನೆಗಳು ರಾಜ್ಯದಲ್ಲಿ ಬೀಡು ಬಿಟ್ಟಿರುವುದೇ ಇದಕ್ಕೆಲ್ಲ ಕಾರಣವಾಗಿದೆ. ಮುಖ್ಯಮಂತ್ರಿಗಳು ಈ ಸಂಘಟನೆಗಳನ್ನು ನಿಷೇಧ ಮಾಡುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕೇವಲ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪಿಎಫ್ಐ ಜತೆ ಬಜರಂಗದಳ, ಶ್ರೀರಾಮ ಸೇನೆ ವಿರುದ್ಧವೂ ಕ್ರಮ: ಸಿದ್ದರಾಮಯ್ಯ

ಒಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೇಟು ಹಾಕುತ್ತಿದ್ದಾರೆ, ಸಂಸ್ಥೆಯೊಂದರ ಸಮೀಕ್ಷೆ ಪ್ರಕಾರ ಬೆಂಗಳೂರು ಕೊಲೆ ಪ್ರಕರಣಗಳಲ್ಲಿ ಎರಡನೇ ಸ್ಥಾನ ಹಾಗೂ ರೇಪ್, ಕಿಡ್ನಾಪ್ ಪ್ರಕರಣಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ಕಲ್ಬುರ್ಗಿ ಹತ್ಯೆ ಪ್ರಕರಣ ವಿಚಾರದಲ್ಲಿ ಇದುವರೆಗೂ ಹಂತಕರನ್ನು ಪತ್ತೆ ಹಚ್ಚಲು ವಿಫಲರಾಗಿದ್ದಾರೆ.

ಕೇವಲ ಸಂಘ ಪರಿವಾರದವರನ್ನು ದೂಷಿಸುವುದು ಸರಿಯಲ್ಲ, ಈ ವಿಚಾರದಲ್ಲಿ ಬುದ್ದಿಜೀವಿಗಳು ತಾರತಮ್ಯದಿಂದ ನಡೆದು ಕೊಳ್ಳುತ್ತಿದ್ದಾರೆ .ಇವರೆಲ್ಲ ಸೋ ಕಾಲ್ಡ್ ಬುದ್ದಿ ಜೀವಿಗಳು ಎಂದು ಟೀಕೆ ಮಾಡಿದರು. ವೈದ್ಯರ, ಆಡಳಿತ ವ್ಯವಸ್ಥೆಯ ಬೇಜವದ್ಬಾರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ವೈದ್ಯಕೀಯ ಸಚಿವರು ಇದುವರೆಗೂ ಆಸ್ಪತ್ರೆಗೆ ಬೇಟಿ ನೀಡಿಲ್ಲ ಎಂದು ಆರೋಪಿಸಿದರು.

ಇದೊಂದು ಬೇಜವದ್ಬಾರಿ ಸರ್ಕಾರ ವಾಗಿದೆ, ಭಷ್ಟಚಾರ ಮಿತಿ ಮೀರಿದೆ. ಅರ್ಕಾವತಿ ವಿಚಾರದಲ್ಲಿ 650 ಎಕರೆ ಜಮೀನು ಡಿನೊಟಿಪೈ ಮಾಡುವ ಮೂಲಕ 10 ಸಾವಿರ ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುತ್ತಿಲ್ಲ, ಈ ಆಯೋದ ವರದಿಯನ್ನು ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಿರುವುದು ಸರಿಯಲ್ಲ ಇಡೀ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ ಆರೋಪಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Leader of Opposition in the state assembly Jagadish Shetter has accused that Chief minister Siddaramaiah hesitationg to ban KFD, PFI and other anti social and anti national organization.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ