ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಚರ್ಚ್ ಸ್ಟ್ರೀಟ್ ರಸ್ತೆ ಸಂಚಾರಕ್ಕೆ ಮುಕ್ತ

|
Google Oneindia Kannada News

ಬೆಂಗಳೂರು, ಮಾರ್ಚ್ 1: ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿದಿದ್ದು ಗುರುವಾರ ಸಂಚಾರಕ್ಕೆ ಮುಕ್ತವಾಗಲಿದೆ. ಹಲವು ತಿಂಗಳಿನಿಂದ ಕುಟುಂತ್ತ ಸಾಗಿದ್ದ ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿ ಮುಗಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಚಾರಕ್ಕೆ ಮುಕ್ತಗೊಳಿಸಲಿದ್ದಾರೆ.

9.2 ಕೋಟಿ ರೂ ವೆಚ್ಚದ ಟಂಡರ್ ಶ್ಯೂರ್ ಯೋಜನೆಯಡಿಯಲ್ಲಿ ನಿರ್ಮಾಣವಾಗಿರುವ ಚರ್ಚ್ ಸ್ಟ್ರೀಟ್ ರಸ್ತೆ 750 ಮೀಟರ್ ಉದ್ದವಿದೆ. ಈ ಯೋಜನೆಯಲ್ಲಿ ಪಾದಚಾರಿ ಮಾರ್ಗ ಅಭಿವೃದ್ಧಿ ಪಡಿಸಲಾಗಿದ್ದು, ಪಾದಚಾರಿಗಳಿಗೂ ಅನುಕೂಲವಾಗಲಿದೆ. ಅಲ್ಲದೆ, ರಸ್ತೆಯ ಬದಿಯಲ್ಲಿ ಕಾರು ಮತ್ತು ಬೈಕ್ ನಿಲುಗಡೆಗೆ ಅವಕಾಶವಿದೆ.

2017ರ ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ ಆಗಸ್ಟ್ ನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರ ನಿರ್ಲಕ್ಷಯದಿಂದಾಗಿ ಕುಟುಂತ್ತ ಸಾಗಿತ್ತು. 2017ರ ಡಿಸೆಂಬರ್ 31 ರ ಮಧ್ಯರಾತ್ರಿ ಹೊಸ ವರ್ಷ ಆಚರಣೆ ವೇಳೆಗೆ ಚರ್ಚ್ ಸ್ಟ್ರೀಟ್ ನ ಒಂದು ಭಾಗವನ್ನು ಮಾತ್ರ ಸಾರ್ವಜನಿಕರಿಗೆ ಬಿಟ್ಟುಕೊಡಲಾಗಿತ್ತು.

Church street road opens today

ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಆಗಸ್ಟ್ ನಲ್ಲಿ ನಡೆದಿದ್ದ ನಗರ ಪರಿವೀಕ್ಷಣೆ ವೇಳೆ ಚರ್ಚ್ ಸ್ಟ್ರೀಟ್ ಗೆ ಭೇಟಿ ನೀಡಿದ್ದರು. ನ.1 ಕ್ಕೆ ಕಾಮಗಾರಿ ಪೂರ್ಣಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೂ ಕಾಮಗಾರಿ ಪೂರ್ಣಗೊಳ್ಳಲು 6 ತಿಂಗಳು ಬೇಕಾಯಿತು.

ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ : ಬಿಬಿಎಂಪಿಗೆ 3ನೇ ಗಡುವು!ಚರ್ಚ್ ಸ್ಟ್ರೀಟ್ ರಸ್ತೆ ಅಭಿವೃದ್ಧಿ : ಬಿಬಿಎಂಪಿಗೆ 3ನೇ ಗಡುವು!

ಚರ್ಚ್ ಸ್ಟ್ರೀಟ್ ರಸ್ತೆಯ ಅಂದ ಹೆಚ್ಚಿಸಲಿವೆ ಗ್ರಾನೈಟ್!ಚರ್ಚ್ ಸ್ಟ್ರೀಟ್ ರಸ್ತೆಯ ಅಂದ ಹೆಚ್ಚಿಸಲಿವೆ ಗ್ರಾನೈಟ್!

English summary
After few months of white topping, tender sure work, 750 meter stretch of church street road will be opened from today for general public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X