ತನ್ವೀರ್ ಸೇಠ್ ಪ್ರಕರಣ ಸಿಐಡಿ ಕೈಗೆ : ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 14: ಸಾರ್ವಜನಿಕ ವೇದಿಕೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಆರೋಪವನ್ನು ಎದುರಿಸುತ್ತಿರುವ ಶಿಕ್ಷಣ ಸಚಿವ ತನ್ವೀರ್ ಸೇಠ್‌ ಅವರ ಮೇಲಿರುವ ಆರೋಪದ ಸತ್ಯಾಸತ್ಯತೆಯನ್ನು ಸಿಐಡಿಯ ಸೈಬರ್ ಸೆಲ್ ಬಯಲೆಗೆಳೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಆದರೆ, ತನ್ವೀರ್ ಸೇಠ್ ಅವರು ಮೇಲ್ನೋಟಕ್ಕೆ ಯಾವುದೇ ತಪ್ಪು ಎಸಗಿಲ್ಲ ಎಂದು ಕಂಡು ಬರುತ್ತದೆ. ಈ ಬಗ್ಗೆ ಸಿಐಡಿ ತನಿಖೆ ನಡೆಸಿ ವರದಿ ನೀಡುವ ತನಕ ನಾನೇನು ಹೆಚ್ಚಿಗೆ ಹೇಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. [ತನ್ವೀರ್ ಅರೆನಗ್ನ ಚಿತ್ರ ವೀಕ್ಷಣೆ, ಸಿದ್ದರಾಮಯ್ಯ, ಪರಂ ಗರಂ]

ರಾಯಚೂರಿನಲ್ಲಿ ಟಿಪ್ಪು ಜಯಂತಿ ಸಮಾರಂಭದಲ್ಲಿ ವೇದಿಕೆ ಏರಿದ್ದ ಜಿಲ್ಲಾ ಉಸ್ತುವಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಆಶ್ಲೀಲ ಚಿತ್ರಗಳನ್ನು ತಮ್ಮ ಮೊಬೈಲಿನಲ್ಲಿ ವೀಕ್ಷಿಸುತ್ತಿದ್ದಾಗ ಖಾಸಗಿ ಮಾಧ್ಯಮದ ಕಣ್ಣಿಗೆ ಬಿದ್ದಿದ್ದರು. [ತನ್ವೀರ್ ಸೇಠ್ ರಾಜೀನಾಮೆಗೆ ಕುಮಾರಸ್ವಾಮಿ ಆಗ್ರಹ]

CID will probe Tanveer Sait case says K'taka CM

ತನ್ವೀರ್ ಅವರು ಭಾನುವಾರ ನನಗೆ ಕರೆ ಮಾಡಿ ಘಟನೆ ಬಗ್ಗೆ ವಿವರಿಸಿದ್ದಾರೆ. ಅವರು ತಪ್ಪು ಮಾಡಿದಂತೆ ಕಾಣುತ್ತಿಲ್ಲ. ಆದರೂ ಈ ಬಗ್ಗೆ ಸಿಐಡಿಯ ಸೈಬಲ್ ಸೆಲ್ ತನಿಖೆ ನಡೆಸಲಿದೆ ಎಂದು ಸಿದ್ದರಾಮಯಯ್ಯ ಹೇಳಿದರು.[ವಿಧಾನಸಭೇಲಿ ನೋಡಿದ್ದು, ಸಾರ್ವಜನಿಕ ಸಮಾರಂಭದಲ್ಲಿ ನೋಡೋದು ಒಂದೇ ಅಲ್ಲ]

ತನ್ವೀರ್ ಸೇಠ್ ಪ್ರಕರಣದ ಬಗ್ಗೆ ವರದಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ದಿಗ್ವಿಜಯ್‌ ಸಿಂಗ್‌ ಅವರು ಮುಖ್ಯ ಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನೀಡುವಂತೆ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಸೂಚಿಸಲಾಗಿದೆ.

ವಾಟ್ಸಾಪ್ ನಲ್ಲಿ ಬಂದಿರುವ ಚಿತ್ರಗಳನ್ನು ವೀಕ್ಷಿಸುತ್ತಿದ್ದೆ. ನಾನು ಸುಸಂಸ್ಕೃತ ಕುಟುಂಬದಿಂದ ಬಂದವನು.ಅರೆನಗ್ನ ಚಿತ್ರಗಳನ್ನು ನೋಡುವ ಕೆಲಸ ಮಾಡಿಲ್ಲ. ಪ್ರಚಲಿತ ವಿದ್ಯಮಾನಗಳನ್ನು ತಿಳಿಯುವುದು ನನ್ನ ಕರ್ತವ್ಯ. ಕಳೆದ ಬಾರಿ ಟಿಪ್ಪು ಜಯಂತಿ ದಿನದಂದು ನಡೆದ ಘರ್ಷಣೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗಿತ್ತು. ಈ ಬಗ್ಗೆ ಸುದ್ದಿ ಬಂದಿರಬಹುದು ಎಂದು ವೀಕ್ಷಿಸುತ್ತಿದೆ ಎಂದು ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Chief Minister on Monday said that he will ask Cyber Cell of CID to probe allegations of his Minister watching obscene pictures. Tanveer Sait was caught on camera watching obscene pictures during Tipu Jayanthi celebrations in Raichur.
Please Wait while comments are loading...