ಚಿಲ್ಲರೆ ಇಲ್ಲ ಅಂತ ಚಿಕಿತ್ಸೆ ನಿರಾಕರಿಸುವಂತಿಲ್ಲ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 14 : ಐನೂರು, ಸಾವಿರ ನೋಟು ರದ್ದು ಹಿನ್ನೆಲೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ ಯಾವುದೇ ಚಿಕಿತ್ಸೆಯನ್ನು ರದ್ದು ಮಾಡುವಂತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ಈ ಹಿನ್ನೆಲೆ ಮಾತನಾಡಿರುವ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ದಿನ 24 ಗಂಟೆಗಳ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ. ಆರ್ಥಿಕ ಸಂಕಷ್ಟ ಪರಿಸ್ಥಿತಿಯಲ್ಲಿ ಚಿಲ್ಲರೆಗಾಗಿ ಯಾವುದೇ ರೋಗಿಯನ್ನು ಹೊರಕಳಿಸುವಂತಿಲ್ಲ ಎಂದು ಆಸ್ಪತ್ರೆಗಳಿಗೆ ಸುತ್ತೋಲೆಯನ್ನು ರವಾನಿಸಿದ್ದಾರೆ.

shalini

104ನಂಬರ್ ಉಚಿತ ಕರೆಯನ್ನು ಮಾಡಿ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ. ಇನ್ನು 108ಕ್ಕೆ ಸಂಪರ್ಕಿಸಿದರೆ ಸೂಕ್ತ ನೆರವು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗುವುದು ಎಂದು ತಿಳಿಸಿದ್ದಾರೆ.[ಇನ್ನು ಎರಡು ವರ್ಷದಲ್ಲಿ ದೇಶದಲ್ಲೇ ಎಲ್ಲ ನೋಟು ಮುದ್ರಣ]

ಈ ಕ್ರಮ ವಿಶೇಷವಾಗಿ ತುರ್ತು ಪರಿಸ್ಥಿತಿಯಲ್ಲಿರುವವರಿಗೆ ಮತ್ತು ಚಿಲ್ಲರೆ ಇಲ್ಲದೆ ಆಸ್ಪತ್ರೆಯಿಂದ ವಂಚಿತವಾಗಿರುವ ರೋಗಿಗಳಿಗೆ ಅನುಕೂಲವಾಗಲಿದೆ. ಹಾಗೆಯೇ ಈ ಸುತ್ತೋಲೆಯನ್ನು ಮೀರಿ ನಡೆದ ಆಸ್ಪತ್ರೆಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
note problem: Private and government hospitals for treatment within 24 hours of the day. Circular of The Department of Health and Family Welfare.
Please Wait while comments are loading...