ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾನೂನು ವಿವಿ ಪ್ರವೇಶ ಪರೀಕ್ಷೆಗೆ ಅರ್ಜಿ

By Manjunatha
|
Google Oneindia Kannada News

ಬೆಂಗಳೂರು, ಜನವರಿ 02: ಪ್ರಸಕ್ತ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಕ್ಲಾಟ್) ಮೇ 13ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ.

Recommended Video

'ನೋ ಹೆಲ್ಮೆಟ್, ನೋ ಪೆಟ್ರೋಲ್' | ಬೆಂಗಳೂರಲ್ಲಿ ಆಗಸ್ಟ್ 5ರಿಂದ ಹೊಸ ನಿಯಮ ಜಾರಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಸೇರಿದಂತೆ ದೇಶದ ಪ್ರತಿಷ್ಠಿತ 19 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್‌ಎಲ್‌ಯು) 5 ವರ್ಷದ ಇಂಟಿಗ್ರೇಟೆಡ್‌ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್‌ಎಲ್‌ಎಂ) ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

CLAT exams to be held on May 13

ಜನವರಿ 01 ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್ 31. ಶುಲ್ಕ ಪಾವತಿಸಲೂ ಕೂಡ ಅಂದೇ ಕೊನೆಯ ದಿನ.

ದ್ವಿತೀಯ ಪಿಯುಸಿಯಲ್ಲಿ ಶೇ 45%ಕ್ಕೂ ಹೆಚ್ಚು ಅಂಕ ಗಳಿಸಿರಬೇಕು, ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳು ಕನಿಷ್ಟ 40% ಅಂಕಗಳಿಸಿರಬೇಕು.

ಹೆಚ್ಚಿನ ಮಾಹಿತಿಗೆ www.clat.ac.in ಭೇಟಿ ನೀಡಿ.

English summary
Law university entrence exam CLAT to be held on may 13. from clearing CLAT students will get addmission to 19 Prestigious Law Universities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X