ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಜನತಾ' ನಸುಕಲ್ಲಿ ಬಂದರೂ ಮಧ್ಯಾಹ್ನವೇ ದೊರೆ 'ದರ್ಶನ'

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 1: ನೂರು ದಿನಗಳ ಸಮ್ಮಿಶ್ರ ಸರ್ಕಾರದ ಪೂರ್ಣಗೊಳಿಸಿರುವ ಹುಮ್ಮಸ್ಸಿನಲ್ಲಿರುವ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಜನತಾ ದರ್ಶನ ಪುನಾರಂಭಿಸಿರುವುದು ನಿಜವಾದರೂ ಮೊದಲ ದಿನವೇ ಎರಡು ಗಂಟೆ ತಡವಾಗಿ ಬಂದು ದೊರೆಗಾಗಿ ಕಾದಿದ್ದ ಸಾವಿರಾರು ಜನರು ಬೇಸರ ಪಡುವಂತಾಯಿತು.

ಈ ಹಿಂದೆ ಪ್ರತಿದಿನ ನಡೆಸುತ್ತಿದ್ದ ಜನತಾ ದರ್ಶನವನ್ನು ವಾರಕ್ಕೊಂದು ದಿನ ಅದು ಶನಿವಾರ ನಡೆಸುವುದಾಗಿ ವಾರ ಮುಂಚೆಯೇ ತಿಳಿಸಿದ್ದ ಕಾರಣ ವಾರದಿಂದ ಜನರು ಸಿಎಂ ಭೇಟಿಗಾಗಿ ಕಾಯುತ್ತಿದ್ದರು. ಆದರೆ ಇಂದು ಸಿಎಂ ತಡವಾಗಿ ಬಂದಿದ್ದರಿಂದ ಸಾರ್ವಜನಿಕರಿಗೆ ತೀವ್ರ ನೋವುಂಟಾಯಿತು.

 ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ ಜನತಾದರ್ಶನಕ್ಕೆ 4 ಸದಸ್ಯರ ತಂಡ ರಚನೆ ಮಾಡಿದ ಎಚ್.ಡಿ.ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಅವರು 12 ವರ್ಷದ ಹಿಂದೆ ನಡೆಸುತ್ತಿದ್ದ ಮಾದರಿಯ ವ್ಯವಸ್ಥಿತ ಜನತಾದರ್ಶನ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಮೈತ್ರಿ ಸರ್ಕಾರ 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಜನರ ಕಷ್ಟಗಳನ್ನು ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಪ್ರತಿ ಶನಿವಾರ ಬೆಂಗಳೂರಿನಲ್ಲಿ ಇರುವಾಗ 12 ವರ್ಷಗಳ ಹಿಂದಿನಂತೆ ಪರಿಣಾಮಕಾರಿ ಜನತಾದರ್ಶನ ನಡೆಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಈ ನೂರು ದಿನಗಳ ಅವಧಿಯಲ್ಲಿ ಪ್ರತಿ ದಿನ ಜನತಾ ದರ್ಶನ ನಡೆಸಿದ್ದೇನೆ; ಜನರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಇಂದಿನಿಂದ ಪ್ರತಿ ಶನಿವಾರ ಮಾತ್ರ ಜನತಾ ದರ್ಶನ ನಡೆಸಲಾಗುವುದು.

ಸಮ್ಮಿಶ್ರ ಸರ್ಕಾರಕ್ಕೆ ಶತದಿನ: ಬೆಳಗ್ಗೆದ್ದು ಯಾರ್ಯಾರ ನೆನೆದರು ಎಚ್ಡಿಕೆ? ಸಮ್ಮಿಶ್ರ ಸರ್ಕಾರಕ್ಕೆ ಶತದಿನ: ಬೆಳಗ್ಗೆದ್ದು ಯಾರ್ಯಾರ ನೆನೆದರು ಎಚ್ಡಿಕೆ?

ಇತರ ದಿನಗಳಲ್ಲಿ ಸರ್ಕಾರದ ಇತರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಶನಿವಾರ ಜನತಾ ದರ್ಶನಕ್ಕೆ ಆಗಮಿಸುವ ಪ್ರತಿಯೊಬ್ಬರ ಕಷ್ಟಗಳನ್ನು ಖುದ್ದು ವಿಚಾರಿಸುವೆ. ರಾತ್ರಿ ಗಂಟೆ ಹನ್ನೊಂದಾದರೂ ಸರಿ, ಎಲ್ಲರ ಸಮಸ್ಯೆ ಆಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

 ರೈತರ ಆಧುನಿಕ ಕೃಷಿ ಪದ್ಧತಿ ಅರಿವಿಗೆ ಅರ್ಧ ದಿನ ಮೀಸಲು

ರೈತರ ಆಧುನಿಕ ಕೃಷಿ ಪದ್ಧತಿ ಅರಿವಿಗೆ ಅರ್ಧ ದಿನ ಮೀಸಲು

ವಾರಕ್ಕೊಮ್ಮೆ ಜನತಾ ದರ್ಶನ ನಡೆಸುವುದಷ್ಟೇ ಅಲ್ಲದೆ ತಿಂಗಳಿಗೊಮ್ಮೆ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ.ಸಾರ್ವಜನಿಕರ ಸಮಸ್ಯೆಯನ್ನು ಆಲಿಸುವುದರ ಜತೆಗೆ ಅರ್ಧ ದಿನವನ್ನು ರೈತರಿಗೆ ಆಧುನಿಕ ಕೃಷಿ ಪದ್ಧತಿಯ ಅರಿವು ಮೂಡಿಸುವುದಕ್ಕಾಗಿ ಮೀಸಲಿಡುವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳೂ ತಾಲ್ಲೂಕಿಗೆ ಭೇಟಿ ನೀಡಿ ನಿಗದಿತ ದಿನದಂದು ಸಾರ್ವಜನಿಕ ಕುಂದು ಕೊರತೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದರು.

 ಎಚ್‌ಡಿಕೆ ಜನತಾ ದರ್ಶನ ಸಮಯ ಬದಲು: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ ಎಚ್‌ಡಿಕೆ ಜನತಾ ದರ್ಶನ ಸಮಯ ಬದಲು: ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಶಾರದಾ ಪೀಠದಿಂದ ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ 11 ಲಕ್ಷ

ಶಾರದಾ ಪೀಠದಿಂದ ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ 11 ಲಕ್ಷ

ಸಂದರ್ಭದಲ್ಲಿ ಶೃಂಗೇರಿ ಶಾರದಾ ಪೀಠದ ಆಡಳಿತಾಧಿಕಾರಿ ಗೌರಿಶಂಕರ್ ಅವರು ಮಠದ ಪರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಗು ಸಂತ್ರಸ್ತರ ನೆರವಿಗಾಗಿ 11 ಲಕ್ಷ ರೂ.ಗಳ ದೇಣಿಗೆ ನೀಡಿದರು. ಇದಲ್ಲದೆ ವಿವಿಧ ಖಾಸಗಿ ಸಂಸ್ಥೆಗಳು, ಶಾಲಾ ಮಕ್ಕಳು, ಗ್ರಾಮಸ್ಥರು ಯಥಾಶಕ್ತಿ ದೇಣಿಗೆ ನೀಡಿರುವುದನ್ನು ಮುಖ್ಯಮಂತ್ರಿಗಳು ಕೃತಜ್ಞತೆಯಿಂದ ಸ್ಮರಿಸಿದರು.

 ಶನಿವಾರಕ್ಕೊಮ್ಮೆ ನಿಗದಿಯಾದ ಸಿಎಂ ಜನತಾ ದರ್ಶನಕ್ಕೆ ಚಾಲನೆ ಶನಿವಾರಕ್ಕೊಮ್ಮೆ ನಿಗದಿಯಾದ ಸಿಎಂ ಜನತಾ ದರ್ಶನಕ್ಕೆ ಚಾಲನೆ

 ಸೆಪ್ಟೆಂಬರ್ 10ರಿಂದ ಉತ್ತರ ಕರ್ನಾಟಕ ಪ್ರವಾಸ

ಸೆಪ್ಟೆಂಬರ್ 10ರಿಂದ ಉತ್ತರ ಕರ್ನಾಟಕ ಪ್ರವಾಸ

ರಾಜ್ಯದ 13ಜಿಲ್ಲೆಗಳಲ್ಲಿ ಬರ ಇದೆ ಎನ್ನುವ ವರದಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರಿಂದ 15ರವರೆಗೆ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದು ಜನತೆಯ ತೊಂದರೆಗಳನ್ನು ಆಲಿಸಲಿದ್ದಾರೆ.

 ಜನತಾದರ್ಶನ ವ್ಯವಸ್ಥೆ

ಜನತಾದರ್ಶನ ವ್ಯವಸ್ಥೆ

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ ಜನತಾದರ್ಶನಕ್ಕೆ ಆಗಮಿಸಿದ ಸಾರ್ವಜನಿಕರಿಗೆ ಸೂರು, ಆಸನ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ; ಕುಡಿಯುವ ನೀರು, ಉಪಾಹಾರದ ವ್ಯವಸ್ಥೆಯನ್ನೂ ಮಾಡಲಾಗಿದೆ. ಜೊತೆಗೆ ಪ್ರತಿಯೊಬ್ಬರಿಗೂ ಟೋಕನ್ ನೀಡಿ, ವ್ಯವಸ್ಥಿತವಾಗಿ ಜನತಾದರ್ಶನ ಏರ್ಪಡಿಸಲು ಕ್ರಮ ವಹಿಸಲಾಗಿದೆ. ವಿವಿಧ ಇಲಾಖೆಗಳ ಅಧಿಕಾರಿಗಳೂ ಸ್ಥಳದಲ್ಲಿದ್ದು, ಜನರ ಸಮಸ್ಯೆಗಳಿಗೆ ಸಾಧ್ಯವಾದಷ್ಟೂ ಸ್ಥಳದಲ್ಲೇ ಪರಿಹಾರ ನೀಡಲು ಕ್ರಮ ವಹಿಸಲಾಗುತ್ತಿದೆ.

English summary
Chief minister H.D. Kumaraswamy has arrived at official residence Krishna to attend Janata Darshan at 12pm instead of 10 am. Hundereds if people were tired to awaiting him to share their problems.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X