ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಿಂಗಳೊಳಗೆ ಎಲಿವೇಟೆಡ್ ಪೆರಿಫೆರಲ್ ರಸ್ತೆ ಕಾಮಗಾರಿ: ಎಚ್ಡಿಕೆ ಘೋಷಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23: ಬೆಂಗಳೂರಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡುವುದರ ಜತೆಗೆ ಬೆಂಗಳೂರು ನಗರ ವಾಸಿಗಳು ಅನುಭವಿಸುತ್ತಿರುವ ಸಮಸ್ಯೆಯಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಮೀಟ್‌ ದಿ ಪ್ರೆಸ್ ನಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೇ ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಸಿದ್ಧಪಡಿಸಿದ್ದೆ ಆದರೆ 12 ವರ್ಷ ಕಳೆದರೂ ಯೋಜನೆ ಇನ್ನೂ ಚರ್ಚೆಯ ಹಂತದಲ್ಲಿದೆ. ಶೀಘ್ರ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದರು.

ಪೆರಿಫೆರಲ್ ರಸ್ತೆ: ದಶಕದ ಬಳಿಕ ಕಡತದ ಧೂಳು ಝಾಡಿಸಿದ ಸರ್ಕಾರ ಪೆರಿಫೆರಲ್ ರಸ್ತೆ: ದಶಕದ ಬಳಿಕ ಕಡತದ ಧೂಳು ಝಾಡಿಸಿದ ಸರ್ಕಾರ

ಬೆಂಗಳೂರಿನ ಪ್ರಮುಖ ರಸ್ತೆಗಳಿಗೆಲ್ಲ ಸಿಸಿಟಿವಿ ಅಳವಡಿಸಲಾಗುತ್ತದೆ, ಮೈಸೂರು, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ರಸ್ತೆಗಳಿಗೂ ಸುಮಾರು 3 ಸಾವಿರ ಕೋಟಿ ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಲಾಗುತ್ತದೆ ಎಂದು ಹೇಳಿದರು.

CM assures elevated corridor work will resume in a month

ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ! ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ!

ಸರ್ಕಾರದ ಬಜೆಟ್‌ನಲ್ಲಿಯೇ ಹಣವನ್ನು ನೀಡಬೇಕಿತ್ತು ಸಚಿವ ಸಂಪುಟ ಒಪ್ಪಿಗೆ ಪಡೆದು ಇನ್ನೊಂದು ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ, ಮುಂದಿನ ಮೂರು ವರ್ಷದಲ್ಲಿ 6500 ಕೋಟಿ ರೂ ಹಣ ರಸ್ತೆ ಅಭಿವೃದ್ಧಿಗೆ ನೀಡುತ್ತೇನೆ ಎಂದರು.

English summary
Chief minister H.D.Kumaraswamy has assured that the work will be resumed in a month with provision of Rs2,000 crores was allocated already and rs.6,500 crores will be provided in next budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X