ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಸಾಲಮನ್ನಾಕ್ಕೆ ಚಾಲನೆ, 477 ರೈತರಿಗೆ ಋಣ ಮುಕ್ತ ಪತ್ರ ವಿತರಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 09 : ರೈತರ ಸಾಲ ಮನ್ನಾ ವಿಚಾರದಲ್ಲಿ ಪ್ರತಿಪಕ್ಷಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ. ಸಾಲಮನ್ನಾ ಪ್ರಕ್ರಿಯೆ ಆರಂಭಿಸಲಾಗಿದ್ದು, 477 ರೈತರಿಗೆ ಋಣಮುಕ್ತ ಪತ್ರ ವಿತರಣೆ ಮಾಡಲಾಗಿದೆ.

ರಾಜ್ಯಾದ್ಯಂತ ಸುಮಾರು 44 ಲಕ್ಷ ರೈತರ 40 ಸಾವಿರ ಕೋಟಿ ರೂಪಾಯಿ ಬೆಳೆಸಾಲ ಮನ್ನಾ ಕಾರ್ಯಕ್ರಮಕ್ಕೆ ಶನಿವಾರ ಅಧಿಕೃತವಾಗಿ ಚಾಲನೆ ಸಿಕ್ಕಿತ್ತು. ದೊಡ್ಡಬಳ್ಳಾಪುರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸಾಲಮನ್ನಾಕ್ಕೆ ಚಾಲನೆ ನೀಡಿದರು.

'ಸಾಲಮನ್ನಾ ಮಾಡಿ ಅಂದ್ರೆ ಮಂಚಕ್ಕೆ ಕರೀತಾರೆ', ರೈತ ಮಹಿಳೆ ಕಣ್ಣೀರು'ಸಾಲಮನ್ನಾ ಮಾಡಿ ಅಂದ್ರೆ ಮಂಚಕ್ಕೆ ಕರೀತಾರೆ', ರೈತ ಮಹಿಳೆ ಕಣ್ಣೀರು

ಕರ್ನಾಟಕ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿಗಳು ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದರೆ, ಅಲ್ಲಿ ನೆರೆದಿದ್ದ ಸಾವಿರಾರು ರೈತರು ಹರ್ಷೋದ್ಘಾರದಿಂದ ಸ್ವಾಗತಿಸಿದರು.

ಮಂಡ್ಯ: ಭತ್ತದ ಕೊಯ್ಲಿಗೆ ತಡವಾಗಿ ಬಂದ ಸಿಎಂ, ವಾಪಸ್ ಹೊರಟ ರೈತರುಮಂಡ್ಯ: ಭತ್ತದ ಕೊಯ್ಲಿಗೆ ತಡವಾಗಿ ಬಂದ ಸಿಎಂ, ವಾಪಸ್ ಹೊರಟ ರೈತರು

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ಸಂಸದ ಎಂ. ವೀರಪ್ಪ ಮೊಯ್ಲಿ ಮುಂತಾದವು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರೈತರಿಂದ ಸಿಎಂಗೆ ಕ್ಲಾಸ್‌, ಮತ್ತೆ ಹಂಗಿನ ಮಾತಾಡಿದ ಕುಮಾರಸ್ವಾಮಿರೈತರಿಂದ ಸಿಎಂಗೆ ಕ್ಲಾಸ್‌, ಮತ್ತೆ ಹಂಗಿನ ಮಾತಾಡಿದ ಕುಮಾರಸ್ವಾಮಿ

ದಿಟ್ಟ ಉತ್ತರ ನೀಡಿದ್ದೇವೆ

ದಿಟ್ಟ ಉತ್ತರ ನೀಡಿದ್ದೇವೆ

ಸಮಾರಂಭದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, 'ಕಳೆದ 3-4 ವರ್ಷಗಳಿಂದ ಬರದ ದವಡೆಗೆ ಸಿಲುಕಿದ್ದ ರೈತರ ಸಾಲ ಮನ್ನಾ ಮಾಡಲು ಒತ್ತಾಯ ಬಂದ ಹಿನ್ನೆಲೆಯಲ್ಲಿ ಹಾಗೂ ರೈತರ ಸಂಕಷ್ಟಗಳನ್ನು ಅರಿತ ಮೈತ್ರಿ ಸರ್ಕಾರ ಸಾಲ ಮನ್ನಾದಂಥ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಅಪನಂಬಿಕೆ ಹುಟ್ಟಿಸಿದವರಿಗೆ ದಿಟ್ಟ ಉತ್ತರ ನೀಡಿದೆ' ಎಂದು ಹೇಳಿದರು.

ಯಾವುದೇ ಸಂಶಯ ಬೇಡ

ಯಾವುದೇ ಸಂಶಯ ಬೇಡ

'ಸಾಲ ಮನ್ನಾ ಕುರಿತು ಯಾವ ಸಂಶಯಗಳಿಗೂ ರೈತರು ಕಿವಿಗೊಡಬಾರದು. ರಾಜ್ಯ ಸರ್ಕಾರ ಸಾಲ ಮನ್ನಾ ಪ್ರಕ್ರಿಯೆಯನ್ನು ನೋಡಿಕೊಳ್ಳಲೆಂದೇ ಪ್ರತ್ಯೇಕ ಸೆಲ್ ಸ್ಥಾಪಿಸಿ, ಒಬ್ಬ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳ ಜೊತೆ 10 ಹತ್ತು ಸಭೆಗಳನ್ನು ನಡೆಸಿದ್ದರೂ, ಅವರ ಕಡೆಯಿಂದ ಸಹಕಾರ ದೊರೆತಿಲ್ಲ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಮಾಡಿರುವ ಮನವಿಯನ್ನು ಪರಿಗಣಿಸಲಾಗಿಲ್ಲ' ಎಂದು ಕುಮಾರಸ್ವಾಮಿ ಹೇಳಿದರು.

ಸಾಲಮನ್ನಾ ಆಗುತ್ತಿದೆ

ಸಾಲಮನ್ನಾ ಆಗುತ್ತಿದೆ

'ರೈತರಿಗೆ ಉತ್ತಮ ಮತ್ತು ನೆಮ್ಮದಿಯ ಬದುಕು ನಡೆಸಲು ರಾಜ್ಯ ಸರ್ಕಾರ ಎಲ್ಲ ಸಹಕಾರ ನೀಡಲಿದೆ. ಮುಖ್ಯ ಮಂತ್ರಿಗಳು, ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕುಗಳ ರೈತರ ಸಾಲ ಮನ್ನಾ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರೆ. ರಾಷ್ಟ್ರದಲ್ಲಿಯೇ ಇದೊಂದು ಐತಿಹಾಸಿಕ ನಿರ್ಧಾರ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಡಾ.ಜಿ.ಪರಮೇಶ್ವರ

ಡಾ.ಜಿ.ಪರಮೇಶ್ವರ

ಸಮಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು, 'ಇದೊಂದು ಐತಿಹಾಸಿಕ ಕಾರ್ಯಕ್ರಮ. ಮೈತ್ರಿ ಸರ್ಕಾರ ರೈತಪರ ಸರ್ಕಾರ ಎನ್ನುವುದಕ್ಕೆ ಸಾಲಮನ್ನಾ ಯೋಜನೆಯೇ ಉದಾಹರಣೆ. ಇನ್ನಾದರೂ ವಿರೋಧಪಕ್ಷದವರು ಕುಹಕವಾಡುವುದನ್ನು ನಿಲ್ಲಿಸಲಿ' ಎಂದು ತಿರುಗೇಟು ಕೊಟ್ಟರು.

ರೈತರು ತಾಳ್ಮೆಯಿಂದ ಇರಬೇಕು

ರೈತರು ತಾಳ್ಮೆಯಿಂದ ಇರಬೇಕು

ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿ, 'ಆಯವ್ಯಯದಲ್ಲಿ ಘೋಷಿಸಿದಂತೆ ಸಾಲಮನ್ನಾ ಯೋಜನೆಗೆ ಚಾಲನೆ ನೀಡುವ ಮೂಲಕ ಸರ್ಕಾರ ತನ್ನ ರಾಜಕೀಯ ಇಚ್ಛಾಶಕ್ತಿಯನ್ನು ಪ್ರದರ್ಶಿಸಿದೆ. ಇದನ್ನು ಅರಿತು ರೈತರು ತಾಳ್ಮೆಯಿಂದ ಸಹಕರಿಸಬೇಕು' ಎಂದು ಕರೆ ನೀಡಿದರು.

ಕೃಷಿ ಸಚಿವರು

ಕೃಷಿ ಸಚಿವರು

ಕೃಷಿ ಸಚಿವ ಎನ್. ಎಚ್. ಶಿವಶಂಕರರೆಡ್ಡಿ ಅವರು ಮಾತನಾಡಿ, ಸರ್ಕಾರ ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿರುವುದಲ್ಲದೆ ಹಲವಾರು ಸಕಾರಾತ್ಮಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಮೊದಲ ಬಾರಿಗೆ ರೈತಪರ ಕಾರ್ಯಕ್ರಮ ರೂಪಿಸಲು ರೈತರ ಸಲಹೆಗಳನ್ನು ಪಡೆಯಲು ರೈತ ಸಲಹಾ ಸಮಿತಿ ರಚಿಸಲಾಗಿದೆ. ಅದರಂತೆಯೇ ರೈತರಿಗೆ ಪೂರಕವಾದ ಕಾರ್ಯಕ್ರಮ ರೂಪಿಸುತ್ತೇವೆ ಎಂದು ನುಡಿದರು.

English summary
Karnataka Chief Minister H.D.Kumaraswamy launched Farmer loan waiver scheme in Doddaballapur. Government handed over debt-free certificates to 477 farmers on December 8, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X