ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಸಿದ್ದರಾಮಯ್ಯ ಟಾಂಗ್

|
Google Oneindia Kannada News

Recommended Video

ಜಿ ಪರಮೇಶ್ವರ್ ಗೆ ಸಿಎಂ ಹೇಳಿಕೆಯ ವಿಷಯಕ್ಕೆ ಟಾಂಗ್ ಕೊಟ್ಟ ಸಿದ್ದರಾಮಯ್ಯ | Oneindia Kannada

ಬೆಂಗಳೂರು, ನವೆಂಬರ್ 19: ಉಪ ಮುಖ್ಯಮಂತ್ರಿ ಪರಮೇಶ್ವರ್ ಮುಖ್ಯಮಂತ್ರಿಯಾಗುವ ಆಸೆಯನ್ನು ಹೇಳಿಕೊಂಡಿದ್ದಾರೆ. ಅದರಲ್ಲಿ ತಪ್ಪೇನು ಇಲ್ಲ, ಆದರೆ ಈಗ ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಹೈಕಮಾಂಡ್ ಸೂಚಿಸಿದರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಪರಮೇಶ್ವರ ಅವರು ಹೇಳಿರುವ ಮಾತಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಜವಾಬ್ದಾರಿಯನ್ನು ನಿಭಾಯಿಸಲು ಸಮರ್ಥರು ಕಾಂಗ್ರೆಸ್ ನಲ್ಲಿ ಸಾಕಷ್ಟು ಜನರಿದ್ದಾರೆ ಆದರೆ ಅವರೆಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಪರಮೇಶ್ವರ ಮುಖ್ಯಮಂತ್ರಿ ಹೇಳಿಕೆ : ಯಾರು, ಏನು ಹೇಳಿದರು? ಪರಮೇಶ್ವರ ಮುಖ್ಯಮಂತ್ರಿ ಹೇಳಿಕೆ : ಯಾರು, ಏನು ಹೇಳಿದರು?

ಬೆಳಗಾವಿಯಲ್ಲಿ ಮಾತನಾಡಿದ್ದ ಪರಮೇಶ್ವರ ಅವರು ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಯಾರು ಇಲ್ಲ, ಒಂದು ವೇಳೆ ಹೈಕಮಾಂಡ್ ನನಗೆ ಮುಖ್ಯಮಂತ್ರಿಯಾಗುವಂತೆ ಸೂಚಿಸಿದರೆ ಆ ಹುದ್ದೆಯಲ್ಲಿ ಕೂರಲು ಸಿದ್ಧನಿದ್ದೇನೆ, ಈಗಾಗಲೇ ಹೈಕಮಾಂಡ್ ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದೆ ಎಂದು ಹೇಳಿದ್ದರು.

CM post not vacant now: Siddaramaiah

ಈ ಹೇಳಿಕೆ ಕುರಿತು ಹೇಳಿಕೆ ನೀಡಿರುವ ಸಿದ್ದರಾಮಯ್ಯ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ. ಶೀಘ್ರವೇ ಸಂಪುಟ ವಿಸ್ತರಣೆಯಾಗಲಿದೆ. ಈಗಾಗಲೇ ಹಲವು ಕಾರಣಗಳಿಗೆ ವಿಳಂಬವಾಗಿದ್ದು ಈಗ ಮತ್ತೆ ತಡ ಮಾಡುವುದಿಲ್ಲ ಎಂದರು.

English summary
A day after deputy chief minister G Parameshwara said he’s ready to take up the responsibility of chief ministership if the high command so desired, Congress leader Siddaramaiah on Sunday said the top post is not vacant now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X