ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಪ್ರವಾಹ ಪೀಡಿತರ ರಕ್ಷಣೆಗೆ ಸೇನಾಪಡೆ : ಕುಮಾರಸ್ವಾಮಿ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 17: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಆಗುತ್ತಿರುವ ಭಾರಿ ಮಳೆ ಹಾಗೂ ತಲೆದೋರಿರುವ ಪ್ರವಾಹ ಹಾಗೂ ಮಣ್ಣಿನ ಕುಸಿತದಿಂದ ಸಿಲುಕಿಕೊಂಡಿರುವ ಜನರ ರಕ್ಷಣೆ ಇನ್ನತರೆ ಪರಿಹಾರಗಳ ಕುರಿತು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್‌ ಅವರ ಬಳಿ ಮಾಹಿತಿ ಪಡೆದರು.

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಹಾಗೂ ಗುಡ್ಡ ಕುಸಿತದಿಂದ ಸಿಲುಕಿಕೊಂಡಿರುವ ಜನರನ್ನು ರಕ್ಷಿಸಲು ಸೇನೆಯು ನೆರವಿಗೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಅಗ್ನಿ ಶಾಮಕ ದಳ, ಕ್ವಿಕ್ ರೆಸ್ಪಾನ್ಸ್ ಟೀಮ್ ಮೊದಲಾದ ತಂಡಗಳು ಜನರ ರಕ್ಷಣೆ ಮಾಡುತ್ತಿವೆ.

ಮಳೆ ಪೀಡಿತ ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಿದ ಸಿಎಂಮಳೆ ಪೀಡಿತ ಜಿಲ್ಲೆಗಳಿಗೆ 200 ಕೋಟಿ ಬಿಡುಗಡೆ ಮಾಡಿದ ಸಿಎಂ

ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಪರಿಹಾರ ಕಾರ್ಯಗಳ ಮಾಹಿತಿ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಗಳೂ ಸಹ ಆಯಾ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯಾಚರಣೆ ಗಳ ಉಸ್ತುವಾರಿ ನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

CM says army taking over reduce operations

ಕೊಡಗು, ಮಂಗಳೂರು, ಮೈಸೂರು, ಮಂಡ್ಯ ಜಿಲ್ಲೆಯಾದ್ಯಂತ ವಿಪರೀತ ಮಳೆ ಸುರಿಯುತ್ತಿದ್ದು ಪ್ರವಾಹದಿಂದ ಜನತೆ ಭಯಭೀತರಾಗಿದ್ದಾರೆ. ಕೊಡಗಿನಲ್ಲಿ ಕಾಫಿ ತೋಟಗಳು, ಮನೆಗಳು ಎಲ್ಲವೂ ಕುಸಿಯುತ್ತಿರುವ ದೃಶ್ಯ ಬೆಚ್ಚಿಬೀಳಿಸುತ್ತಿದೆ, ಎಲ್ಲವನ್ನೂ ಭೂಮಿತಾಯಿ ತನ್ನ ಒಡಲಲ್ಲಿ ಹಾಕಿಕೊಳ್ಳುತ್ತಿದ್ದಾಳೆ. ಸಂತ್ರಸ್ತರ ರಕ್ಷಣಾ ಕಾರ್ಯ ಮುಂದುವರೆದಿದೆ. ಪ್ರವಾಹ ಪೀಡಿತರ ರಕ್ಷಣೆಗೆ ಸೇನಾ ಪಡೆಯನ್ನು ಬಳಕೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕೊಡಗಿನಲ್ಲಿ ಜಲಪ್ರಳಯ, ಕಣ್ಣೆದುರೇ ಕುಸಿಯುತ್ತಿವೆ ಮನೆ, ಗುಡ್ಡ, ಕಾಫಿತೋಟಕೊಡಗಿನಲ್ಲಿ ಜಲಪ್ರಳಯ, ಕಣ್ಣೆದುರೇ ಕುಸಿಯುತ್ತಿವೆ ಮನೆ, ಗುಡ್ಡ, ಕಾಫಿತೋಟ

English summary
Chief minister H.D.Kumaraswamy has said army has reached Coorg district and taking over rescue operation. He is constantly touch with chief secretary TM Vijay Bhaskar to supervise the rescue operation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X