ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲ್ಲರಿಗೂ ಉಚಿತ ಬಸ್‌ಪಾಸ್‌ ನೀಡಲು ಸಾಧ್ಯವಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

By Nayana
|
Google Oneindia Kannada News

ಬೆಂಗಳೂರು, ಜು.21: ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ ಪಾಸ್‌ ನೀಡುತ್ತೇನೆ ಎಂದು ನಾನು ಯಾವತ್ತೂ ಹೇಳಿಲ್ಲ, ಎಲ್ಲಿರಿಗೂ ಉಚಿತ ಬಸ್‌ಪಾಸ್‌ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಎಲ್ಲದಕ್ಕೂ ಸಬ್ಸಿಡಿ ಕೊಡಿ ಎಂದರೆ ಹೇಗೆ, ಚುನಾವಣೆಗೂ ಮುನ್ನ ಉಚಿತ ಬಸ್‌ಪಾಸ್‌ ಕೊಡುವುದಾಗಿ ನಾನು ಹೇಳಿಲ್ಲ, ಎಂದು ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಇಲ್ಲ ಎಂಬ ಸಂದೇಶವನ್ನು ಕುಮಾರಸ್ವಾಮಿ ರವಾನಿಸಿದ್ದಾರೆ. ಪ್ರಧಾನಿ ಮೋದಿ ನಮ್ಮದು ಶ್ರೀಮಂತ ರಾಷ್ಟ್ರ ಎನ್ನುತ್ತಾರೆ, ಶ್ರೀಮಂತರಿದ್ದ ಮೇಲೆ ಸರ್ಕಾರ ಎಲ್ಲಾ ಉಚಿತ ಯೋಜನೆ ಯಾಕೆ ನೀಡಬೇಕು ಎಂದರು.

ಬೆಂಗಳೂರು: ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಶಾಲಾ-ಕಾಲೇಜುಗಳು ಬಂದ್‌ ಬೆಂಗಳೂರು: ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಶಾಲಾ-ಕಾಲೇಜುಗಳು ಬಂದ್‌

ಪದಾಧಿಕಾರಿಗಳ ನೇಮಕಾತಿ ಬದಲಾವಣೆಗೆ ಚರ್ಚೆ ನಡೆದಿದೆ, ರಾಜ್ಯಾಧ್ಯಕ್ಷರ ಬದಲಾವಣೆಗೂ ಚರ್ಚೆ ನಡೆದಿದೆ, ವಾರದೊಳಗೆ ದೇವೇಗೌಡರು ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ, ಲೋಕಸಭೆ ಚುನಾವಣೆ ಸಿದ್ಧತೆಗಾಗಿ ಪಕ್ಷ ಸಂಘಟನೆಗೆ ಒತ್ತು ನೀಡಿದ್ದೇವೆ ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್‌ ಸಭೆ ನಡೆದಿದೆ ಎಂದು ತಿಳಿಸಿದರು.

CM says he never assured free bus pass

ಇಂದು ಉಚಿತ ಬಸ್‌ಪಾಸ್‌ ನೀಡುವಂತೆ ಆಗ್ರಹಿಸಿ ಎಬಿವಿಪಿ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಿದರು, ಜತೆಗೆ ಶಾಲಾ-ಕಾಲೇಜುಗಳನ್ನು ಬಂದ್‌ ಮಾಡಲಾಗಿತ್ತು. ಉಚಿತ ಬಸ್‌ಪಾಸ್‌ ನೀಡುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‌ಪಾಸ್‌ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.

English summary
Chief minister H.D.Kumaraswamy has clarified that he never assured or promised to issuing free bus for school children and asked press persons why should give subsidy for all in all schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X