ತುರ್ತು ಸಭೆ, ಬಿಬಿಎಂಪಿ ಅಧಿಕಾರಿಗಳ ಕಿವಿ ಹಿಂಡಿದ ಸಿಎಂ!

Posted By:
Subscribe to Oneindia Kannada

ಬೆಂಗಳೂರು, ಮೇ 19 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ಬಿಬಿಎಂಪಿ ಅಧಿಕಾರಿಗಳ ಜೊತೆ ದಿಢೀರ್ ಸಭೆ ನಡೆಸಿದರು. ಬೆಂಗಳೂರಿನ ರಸ್ತೆ ಮತ್ತು ಚರಂಡಿ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳ ಕಿವಿ ಹಿಂಡಿದ ಸಿದ್ದರಾಮಯ್ಯ ಅವರು, ಮಳೆಗಾಲ ಎದುರಿಸಲು ಸಿದ್ಧವಾಗಿ ಎಂದು ಸೂಚನೆ ನೀಡಿದರು.

ಮುಂಬರುವ ಮಳೆಗಾಲದ ಹಿನ್ನೆಲೆಯಲ್ಲಿ ಬೆಂಗಳೂರಿನ ರಸ್ತೆಗಳ ನಿರ್ವಹಣೆ ಬಗ್ಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಸಿದ್ದರಾಮಯ್ಯ ಅವರು ಬಿಬಿಎಂಪಿ ಇಂಜಿನಿಯರ್ ಅವರೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ನಡೆಸಿದರು. [ಬಿಬಿಎಂಪಿಗೆ ಸವಾಲೊಡ್ಡುವಂತೆ ಬೆಂಗಳೂರಲ್ಲಿ ವರ್ಷಧಾರೆ]

siddaramaiah

ಮೈಸೂರು ರಸ್ತೆಯಿಂದ ಬೆಂಗಳೂರು ವಿಶ್ವ ವಿದ್ಯಾನಿಲಯದ ವರೆಗಿನ ರಸ್ತೆಗಳ ಗುಣಮಟ್ಟದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ತಕ್ಷಣವೇ ಅವುಗಳ ದುರಸ್ತಿಗೆ 'ನಗರೋತ್ಥಾನ' ಯೋಜನೆಯಡಿ ಕ್ರಮಕೈಗೊಳ್ಳುವಂತೆ ಖಡಕ್ ಸೂಚನೆ ನೀಡಿದರು. [ಬೆಂಗಳೂರು ನಗರಕ್ಕೊಂದು 10 ಪಥದ ರಸ್ತೆ]

ಮುಂಗಾರು ಮಳೆ ಆರಂಭಗೊಳ್ಳುವ ಮೊದಲು ನಗರದ ಎಲ್ಲಾ ಚರಂಡಿಗಳಲ್ಲಿರುವ ಕಸ ತೆಗೆಯುವಂತೆ ಮತ್ತು ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. [ಮುಂಗಾರು ಪ್ರವೇಶ ಒಂದು ವಾರ ವಿಳಂಬ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Chief Minister Siddaramaiah directed BBMP officials to remove silt and debris from storm-water drains before the monsoon to ensure free flow of rain water.
Please Wait while comments are loading...