ನೋಟು ಸಮಸ್ಯೆ: ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ

Written By: Ramesh
Subscribe to Oneindia Kannada

ಬೆಂಗಳೂರು, ನವೆಂಬರ್. 14 : ರಾಜ್ಯದೆಲ್ಲೆಡೆ 500 ರೂ ಹಾಗೂ 1000 ರೂ ನೋಟಿನ ಬದಲಾವಣೆಗೆ ಜನರು ತೊಂದರೆ ಪಡುತ್ತಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ವಿವಿಧ ಬ್ಯಾಂಕ್ ಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

Siddaramaiah instructed to bank officers for help the people

ಜನರು ಬ್ಯಾಂಕ್ ಗಳ ಮುಂದೆ ಸರತಿ ಸಾಲಿನಲ್ಲಿ ದಿನವಿಡೀ ನಿಂತು, ಹಳೆಯ ನೋಟುಗಳನ್ನು ಬದಲಾಯಿಸುತ್ತಿರುವ ಸ್ಥಿತಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದರು.

ಜನರಿಗೆ ಆಗುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸಿ, ಅವರು ದಿನವಿಡೀ ಸರತಿ ಸಾಲಿನಲ್ಲಿ ನಿಂತು ಬವಣೆ ಪಡುವಂತೆ ಆಗಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಹಣ ಬದಲಿಸಿಕೊಳ್ಳಲು ಬ್ಯಾಂಕ್ ಮುಂದೆ ಕಿಕ್ಕಿರಿದು ನಿಂತಿದ್ದ ಜನರಿಗೆ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಸ್ಕೆಟ್ ಮತ್ತು ನೀರು ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah instructed to bank officers on November 14,to work with Banks & help the people. because Common man is facing inconvenience & hardship due to Demonetization.
Please Wait while comments are loading...