ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣೆ ಸ್ಪರ್ಧೆ ವಿಚಾರ, ಹೈಕಮಾಂಡ್ ನಿರ್ಧರಿಸಲಿದೆ: ಸಿದ್ದರಾಮಯ್ಯ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವಾಗಲಿ, ವರುಣಾ ಅಸೆಂಬ್ಲಿ ಕ್ಷೇತ್ರವಾಗಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ.

By Mahesh
|
Google Oneindia Kannada News

ಬೆಂಗಳೂರು, ಮೇ 21: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರವಾಗಲಿ, ವರುಣಾ ಅಸೆಂಬ್ಲಿ ಕ್ಷೇತ್ರವಾಗಲಿ ಯಾವ ಕ್ಷೇತ್ರದಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸಲಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ(ಮೇ 21)ದಂದು ಹೇಳಿದರು.

ಶನಿವಾರದಂದು ಕೊಪ್ಪಳದಿಂದ ಸ್ಪರ್ಧಿಸುವೆ ಎಂದಿದ್ದ ಸಿದ್ದರಾಮಯ್ಯ ಅವರು ತಮ್ಮ ಮಾತು ಬದಲಾಯಿಸಿ, ಯಾರು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಲಿದೆ ಎಂದರು.[ಕೊಪ್ಪಳದಿಂದ ಸ್ಪರ್ಧಿಸುತ್ತಾರಾ ಮುಖ್ಯಮಂತ್ರಿ ಸಿದ್ದರಾಮಯ್ಯ?]

CM Siddaramaiah on Chamundeshwari and Varuna Assembly Election ticket

ವರುಣಾ ಕ್ಷೇತ್ರದಿಂದ ತಮ್ಮ ಪುತ್ರ ಡಾ.ಯತೀಂದ್ರ ಅಖಾಡಕ್ಕಿಳಿಯುವ ಮುನ್ಸೂಚನೆಯನ್ನೂ ನೀಡಿದ್ದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯುವ ಸುದ್ದಿಯೂ ಇದೆ. ನಾನು ಎರಡು ಕಡೆಯಿಂದ ನಿಲ್ಲಬೇಕು ಎಂಬ ಒತ್ತಡವೂ ಇದೆ ಎಂದಿದ್ದಾರೆ.

2013ರಲ್ಲಿ ಇದೇ ನನ್ನ ಕೊನೆ ಚುನಾವಣೆ, ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದ ಸಿದ್ದರಾಮಯ್ಯ ಅವರು ದಿನಕ್ಕೊಂದು ಹೇಳಿಕೆ ನೀಡಿ ಗೊಂದಲ ಮೂಡಿಸುತ್ತಿರುವುದಂತೂ ಹೌದು.

1991 ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧಿಸಿ 10 ಸಾವಿರ ಮತಗಳಿಂದ ಸೋತಿದ್ದರು. ಪ್ರಸ್ತುತ ವರುಣಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಸರ್ಕಾರದ ಬಗ್ಗೆ ಜನಾಭಿಪ್ರಾಯವೇನು ಎಂಬ ಕುರಿತು ಈಗಾಗಲೇ ಆಂತರಿಕ ಸಮೀಕ್ಷೆ ಮಾಡಿಸುತ್ತಿದ್ದೇನೆ. ಶಾಸಕರ ಸಾಧನೆಗಳ ಬಗ್ಗೆ ಸಮೀಕ್ಷೆ ಮಾಡಿಸಲಾಗುತ್ತಿದೆ. ಸಮೀಕ್ಷಾ ವರದಿ ಹಾಗೂ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಚುನಾವಣೆಯಲ್ಲಿ ಟಿಕೇಟ್ ನೀಡಲಾಗುವುದು ಎಂದರು.

English summary
Who will contest from Chamundeshwari assembly constituency or Varuna will be decided by Congress High command, I will not comment on this further said CM Siddaramaih on Sunday (May 21)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X