ಜನವರಿ 18ರಿಂದ ಫೆ.6ರ ವರೆಗೆ ರಾಜ್ಯ ಬಜೆಟ್ ಪೂರ್ವಭಾವಿ ಸಭೆ

Written By: Staff
Subscribe to Oneindia Kannada

ಬೆಂಗಳೂರು, ಜನವರಿ 10: ಸಿದ್ದರಾಮಯ್ಯ ಅವರ ಕೊನೆಯ ಬಜೆಟ್ ಮಂಡನೆಗೆ ದಿನ ನಿಗದಿಯಾಗಿದೆ. ಇದೇ ಫೆಬ್ರವರಿಯಲ್ಲಿ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಸಿದ್ದರಾಮಯ್ಯ ಅವರು ತಮ್ಮ 5 ವರ್ಷಗಳ ಅವಧಿಯ ಕೊನೆಯ ಬಜೆಟ್ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಸಿದ್ದರಾಮಯ್ಯ ಅವರು ಇದೇ ಜನವರಿ 18ರಿಂದ ಫೆಬ್ರವರಿ 6ರ ವರೆಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಹಾಗೂ ಮುಖ್ಯಸ್ಥರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದು, ಸಭೆಯಲ್ಲಿ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆಯಲಿದ್ದಾರೆ.

ಫೆ. 16ರಂದು ಸಿದ್ದರಾಮಯ್ಯ ಅವರಿಂದ ಕೊನೆಯ ಬಜೆಟ್ ಮಂಡನೆ

ಫೆಬ್ರವರಿ 5ರಿಂದ ವಿಧಾನಸಭೆ ಮತ್ತು ವಿಧಾನ ಪರಿಷತ್ ಜಂಟಿ ಅಧಿವೇಶನ ಆರಂಭವಾಗಲಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಭಾಷಣ ಮಾಡಲಿದ್ದಾರೆ.

ಸಂಕ್ರಾಂತಿ ವಿಶೇಷ ಪುಟ

CM Siddaramaiah will hold a preliminary meeting before budget with officials from Jan 18 to Feb 6

ಭಾಷಣದ ಮೇಲೆ ಫೆಬ್ರವರಿ 9ರವರೆಗೆ ಚರ್ಚೆ ನಡೆಯಲಿದೆ. ನಂತರ ಫೆಬ್ರವರಿ 16ರಂದು ಸಿದ್ದರಾಮಯ್ಯನವರು ತಮ್ಮ ಸರಕಾರದ ಐದು ವರ್ಷದ ಅವಧಿಯ ಕೊನೆಯ ಬಜೆಟ್ ಮಂಡಿಸಲಿದ್ದಾರೆ.

ಮುಂದೆ ಚುನಾವಣೆ ಇರುವುದರಿಂದ ಸಿದ್ದರಾಮಯ್ಯ ಅವರ ಕೊನೆ ಬಜೆಟ್ ಬಗ್ಗೆ ಜನರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka chief minister Siddaramaiah will hold a preliminary meeting with officials and heads of various government departments from January 18 to February 6 and will receive opinion and suggestions at the meeting before Karnataka budget to be tabled on february 16.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ