ದಿಡ್ಡಳ್ಳಿ ಆದಿವಾಸಿಗಳಿಗೆ ಶೀಘ್ರ ಪುನರ್ವಸತಿ ವ್ಯವಸ್ಥೆ, ಸಿಎಂ

Posted By:
Subscribe to Oneindia Kannada

ಬೆಂಗಳೂರು, ಡಿಸೆಂಬರ್ 21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಡಿಕೇರಿ ಜಿಲ್ಲೆಯ ದಿಡ್ಡಳ್ಳಿ ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಶೀಘ್ರವೇ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರಿಗೆ ಸೂಚನೆ ನೀಡಿದರು.

ಆದಿವಾಸಿಗಳ ಪರವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ತಮ್ಮನ್ನು ಭೇಟಿ ಮಾಡಿದ ನಿಯೋಗದೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಸಮಾಜ ಕಲ್ಯಾಣ ಸಚಿವ ಆಂಜನೇಯ ಅವರಿಗೆ ಮುಖ್ಯಮಂತ್ರಿಯವರು ಸ್ಥಳಕ್ಕೆ ಭೇಟಿ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು.[ದಿಡ್ಡಳ್ಳಿ ಆದಿವಾಸಿಗಳ ಪುನರ್ವಸತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ]

CM: The rapid rehabilitation of adivasis diddalli

ಆದಿವಾಸಿಗಳಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಜಾಗವನ್ನೂ ಗುರುತಿಸಲಾಗಿದೆ. ಆದಷ್ಟು ಬೇಗ ಅವರಿಗೆ ಮರು ವಸತಿ ಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದಕ್ಕಾಗಿ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭಿವೃದ್ಧಿಗೆ ನಿಗಧಿಪಡಿಸಿರುವ ಅನುದಾನವನ್ನು ಬಳಸಿಕೊಳ್ಳುವಂತೆಯೂ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.

ಮಡಿಕೇರಿ ಜಿಲ್ಲೆಯ ದಿಡ್ಡಳ್ಳಿ ಆದಿವಾಸಿ ಸಮುದಾಯದ ಜನರು ಸಿಎಂ ಜೊತೆ ಮುಕ್ತವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The rapid rehabilitation of adivasis diddalli said Chief Minister Siddaramaiah to Social Welfare Minister H Anjaneya in bengaluru.
Please Wait while comments are loading...