ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾರದ ಹೆಲಿಕಾಪ್ಟರ್‌: ರಸ್ತೆ ಮೂಲಕ ಪ್ರವಾಹ ಸಮೀಕ್ಷೆಗೆ ಸಿಎಂ ನಿರ್ಧಾರ

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 18: ಕೊಡಗಿನಲ್ಲಿ ಪ್ರವಾಹ ಮಟ್ಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಈ ಹಿನ್ನೆಲೆ ವೈಮಾನಿಕ ಸಮೀಕ್ಷೆಯನ್ನು ರದ್ದುಪಡಿಸಿ ಖುದ್ದಾಗಿ ಪ್ರವಾಹಪೀಡಿತ ಪ್ರದೇಶಗಳಿಗೆ ರಸ್ತೆಯ ಮೂಲಕವೇ ತೆರಳಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.

ಪ್ರವಾಹಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ ಪ್ರವಾಹಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಈ ವಿಷಯ ತಿಳಿಸಿದ್ದಾರೆ.ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ಹಾರಾಟ ಮಾಡಲು ಸಾಧ್ಯವಿಲ್ಲ ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ಇಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನಿಂದ ಪಿರಿಯಾಪಟ್ಟಣ ತೆರಳಲಿರುವ ಸಿಎಂ ಅಧಿಕಾರಿಗಳ ಜತೆಗೆ ಸಭೆ ನಡೆಸಲಿದ್ದು ಬಳಿಕ ರಸ್ತೆ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ? ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ನೆರವಾಗುವುದು ಹೇಗೆ?

ಮಳೆಗೆ ತತ್ತರಿಸಿದ ಕೊಡಗಿಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದಾರೆ, ಕೇಂದ್ರ ಸಚಿವರು ಮತ್ತು ಸಂಸದರ ಮೂಲಕ ಪ್ರಧಾನಿಗೆ ಒತ್ತಡ ಹಾಕಲು ಎಚ್ಡಿಕೆ ಮನವಿ ಮಾಡಿದ್ದಾರೆ. ಆಗಸ್ಟ್ 19, ಭಾನುವಾರ ಪ್ರವಾಹ ಪೀಡಿತ ನಂಜನಗೂಡು ಮತ್ತು ಕಬಿನಿಗೆ ಸಿಎಂ ಭೇಟಿ ನೀಡಲಿದ್ದಾರೆ.

CM will visit flood area by road

ಕರ್ನಾಟಕದ ಮೂವತ್ತು ಜಿಲ್ಲೆಗಳಲ್ಲಿ, ಒಟ್ಟು ಐದು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಅತಿಯಾದ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

English summary
Due to bad weather chief minister H.D.Kumaraswamy has been cancelled aerial survey of flood effected areas in kodagu district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X