ಬೆಂಗಳೂರು ವಿದ್ಯಾರ್ಥಿನಿಗೆ ಕಿರುಕುಳ: ಓರ್ವನ ಬಂಧನ
ಬೆಂಗಳೂರು, ಜು.15: ಪುಲಿಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿಯನ್ನು ನಾಲ್ವರು ಯುವಕರು ಬಲವಂತವಾಗಿ ಸ್ಕೋಡಾಕಾರಿನಲ್ಲಿ ಕುಳ್ಳಿರಿಸಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಜೀರ್ ಬಂಧಿತ ಆರೋಪಿಯಾಗಿದ್ದು, ನಾಪತ್ತೆಯಾಗಿರುವ ಮೂವರ ಬಂಧನಕ್ಕೆ ಪೊಲೀಸರು ಪತ್ತೆ ಕಾರ್ಯ ಆರಂಭಿಸಿದ್ದಾರೆ.

ಘಟನೆಯ ವಿವರ: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮತ್ತು ಆಕೆಯ ಪ್ರಿಯಕರ ಜು.11 ಶುಕ್ರವಾರ ರಾತ್ರಿ ಸ್ನೇಹಿತರು ಆಯೋಜಿಸಿದ ಪಾರ್ಟಿಗಾಗಿ ಪುಲಿಕೇಶಿ ನಗರದ ರೆಸ್ಟೋರೆಂಟ್‌ಗೆ ಬಂದಿದ್ದಾರೆ. ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮುಗಿಸಿ ಮಧ್ಯರಾತ್ರಿ 11.45ರ ವೇಳೆಗೆ ಹೊರಗಡೆ ಅವರ ಕಾರಿನಲ್ಲಿ ತೆರಳಲು ಮುಂದಾದಾಗ, ಒಂದು ಸ್ಕೋಡಾ ಕಾರು ಇವರ ಸಮೀಪ ಬಂದು ನಿಂತಿದೆ. ಕಾರಿನಲ್ಲಿದ್ದ ಯುವಕರು ಇಬ್ಬರಿಗೆ ಚಾಕು ತೋರಿಸಿ ಕಾರಿನ ಒಳಗೆ ಬರುವಂತೆ ಬೆದರಿಸಿದ್ದಾರೆ.[ಇಬ್ಬರು ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆ ತಡೆ]
ಪ್ರಿಯಕರನನ್ನು ಕಾರಿನ ಮುಂಭಾಗದಲ್ಲಿ ಕುಳಿತುಕೊಳ್ಳುವಂತೆ ಹೇಳಿ, ವಿದ್ಯಾರ್ಥಿನಿಯನ್ನು ಹಿಂಭಾಗದಲ್ಲಿ ಕುಳ್ಳಿರಿಸಿದ್ದಾರೆ. ಬಳಿಕ ರಾತ್ರಿಯಿಡಿ ನಗರದಲ್ಲಿ ಕಾರಿನಲ್ಲಿ ಸುತ್ತಾಡಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಇಬ್ಬರನ್ನು ಕಾಕ್ಸ್ ಟೌನ್ನ ರೇಲ್ವೇ ಹಳಿ ಪಕ್ಕ ಬಿಟ್ಟು ಪರಾರಿಯಾಗಿದ್ದಾರೆ.
ಘಟನೆಯಿಂದ ಹೆದರಿ ಆರಂಭದಲ್ಲಿ ದೂರು ನೀಡದ ವಿದ್ಯಾರ್ಥಿನಿ ಮತ್ತು ಪ್ರಿಯಕರ ಇದೀಗ ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಸ್ಕೋಡಾ ಕಾರ್ ನಂಬರ್ ದಾಖಲಿಸಿದ್ದು, ಈ ನಂಬರ್ ಆಧಾರದ ಮೇಲೆ ಪೊಲೀಸರು ಕಾರಿನ ಮಾಲೀಕ ಸೈಯದ್ ನಜೀರ್‌ನನ್ನು ಬಂಧಿಸಿ, ಸ್ಕೋಡಾ ಕಾರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನ ವಿಚಾರಣೆ ನಡೆಯುತ್ತಿದ್ದು, ನಾಪತ್ತೆಯಾಗಿರುವ ಯುವಕರ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ
.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications