ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಸತಿ ಪ್ರದೇಶದಲ್ಲಿ ಕಾನೂನು ಬಾಹಿರ ವಾಣಿಜ್ಯ ಚಟುವಟಿಕೆಗಳಿಗೆ ಬ್ರೇಕ್

By Nayana
|
Google Oneindia Kannada News

ಬೆಂಗಳೂರು, ಜೂನ್ 14: ಬೆಂಗಳೂರಿನ ವಸತಿ ಪ್ರದೇಶದಲ್ಲಿ ಕಾನೂನು ಬಾಹಿರ ವಾಣಿಜ್ಯ ಚಟುವಟಿಕೆಗಳನ್ನು ತೆರವುಗೊಳಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನ ವಸತಿ ಪ್ರದೇಶಗಳ ಶೇ.30ರಷ್ಟು ಜಾಗ ವಾಣಿಜ್ಯ ವಹಿವಾಟಿಗೆ ಬಳಕೆಯಾಗುತ್ತಿದ್ದು, ಅವುಗಳನ್ನು ತೆರವು ಮಾಡಲಾಗುತ್ತದೆ, ವಸತಿ ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ವಾಣಿಜ್ಯ ಚಟುವಟಿಕೆ ನಿಲ್ಲಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಸೂಕ್ತ ಮಾಹಿತಿ ದೊರೆತ ತಕ್ಷಣ ಆಂದೋಲನದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಬೆಂಗಳೂರಲ್ಲಿ 6 ಸಾವಿರ ರಸ್ತೆಗುಂಡಿ 10 ದಿನಗಳಲ್ಲಿ ಬಂದ್!ಬೆಂಗಳೂರಲ್ಲಿ 6 ಸಾವಿರ ರಸ್ತೆಗುಂಡಿ 10 ದಿನಗಳಲ್ಲಿ ಬಂದ್!

ಬೆಳ್ಳಂದೂರು ಕೆರೆ, ಕಗ್ಗದಾಸಪುರ ಕೆರೆಗಳ ಭೇಟಿ ನೀಡಿದ್ದು, ಅಲ್ಲಿನ ಅವ್ಯವಸ್ಥೆಗಳಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದೆ. ಅದನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ರಸ್ತೆ ಗುಂಡಿಗಳಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಒಂದು ವಾರದಲ್ಲಿ ರಸ್ತೆ ಗುಂಡಿ ಮುಚ್ಚಲು ಆದೇಶಿಸಿದ್ದೇವೆ ಎಂದರು ಹೇಳಿದರು.

Commercial activities will be restricted in residential areas in Bengaluru

ಅಡ್ಡಾದಿಡ್ಡಿಯಾಗಿ ವಾಹನ ಪಾರ್ಕಿಂಗ್ ಮಾಡುವವರಿಗೂ ದಂಡ ವಿಧಿಸಲಾಗುತ್ತದೆ, ಸಾರ್ವಜನಿಕರು ಹೆಚ್ಚಾಗಿ ಬಿಎಂಟಿಸಿ ಕೆಎಸ್‌ಆರ್‌ಟಿಸಿ ಹಾಗೂ ಮೆಟ್ರೋ ಪ್ರಯಾಣ ಮಾಡುವುದು ಸೂಕ್ತ. ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡಿದರೆ ವಾಹನ ಸವಾರರಿಗೆ ದಂಡ ವಿಧಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದರು.

English summary
Deputy chief minister and bengaluru development minister Dr. G. Parameshwar has given directions to officials that commercial activities should be restricted in residential area in Bangalore. It is said that around 30 percent of commercial activities in the city is operating in residential area illegally.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X