ಅನಂತ್ ಕುಮಾರ್ ಹೆಗಡೆ, ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲು

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 24: ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಶಾಸಕ ಸಿಟಿ ರವಿ ವಿರುದ್ಧ ದೂರು ದಾಖಲಾಗಿದೆ.

ವೇದಿಕೆಯಲ್ಲಿ ಟಿಪ್ಪು ಚರಿತ್ರೆ ಬಿಚ್ಚಿಡುವೆ : ಅನಂತ್ ಕುಮಾರ್ ಹೆಗಡೆ

ಆಲಂ ಪಾಷ ಎನ್ನುವರು ಬೆಂಗಳೂರಿನ10ನೇ ಎಸಿಎಂಎಂ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲು ಪೊಲೀಸರು ನಿರಾಕರಿಸಿದರಿಂದ ಆಲಂ ಪಾಷ ಅವರು, ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.

Complaint filed against union minister Ananth Kumar Hegde and CT Ravi for controversial statement on Tipu

ಸಚಿವ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶನ ಕೋರಿ ದೂರು ದಾಖಲಿಸಿದ್ದು, ಅಕ್ಟೋಬರ್ 30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

16 ನೇ ಶತಮಾನದಲ್ಲಿ ಮೈಸೂರನ್ನು ಆಳಿದ ಟಿಪು ಸುಲ್ತಾನ್ ಒಬ್ಬ ಅತ್ಯಾಚಾರಿ ಮತ್ತು ಕೊಲೆಗಡುಕ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ನ.10 ರಂದು ನಡೆಯಲಿರುವ ಟಿಪ್ಪು ಜಯಂತಿಯ ಆಮಂತ್ರಣ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಮುದ್ರಿಸದಿರುವಂತೆಯೂ ಹೇಳಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Complaint filed against union minister Ananth Kumar Hegde and CT Ravi for controversial statement on Tipu Sultan. Alam Pasha has filed the complaint in 10th ACMM court Bengaluru on Oct 24.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ