ಹೊಸ ವರ್ಷದ ಆರಂಭದ ದಿನವೇ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಂಗಳೂರು, ಜನವರಿ 01: 2018ರ ಹೊಸ ವರ್ಷದ ಆರಂಭದ ಮೊದಲ ದಿನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ದಾಖಲಾಗಿದೆ.

ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರದ ಸಾಧನೆಗಳ ಪ್ರಚಾರಕ್ಕೆಂದು ಸುಮಾರು 129 ಕೋಟಿ ರು. ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ ಇಂದು (ಸೋಮವಾರ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಸಾಧನೆಗಳ ಪ್ರಚಾರಕ್ಕೆಂದು 129 ಕೋಟಿ ರು. ಬೃಹತ್ ಮೊತ್ತವನ್ನು ದುರ್ಬಳಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ತನಿಖೆಗೆ ಒಳಪಡಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ನಾಗರಿಕ ಹಕ್ಕು ಹೋರಾಟ ಸಮಿತಿ ಸಿಬಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದೆ.

CM Siddaramaiah

ಅಷ್ಟೇ ಅಲ್ಲದೇ ಇದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಿದ ವಾರ್ತಾ ಇಲಾಖೆಯ ಪ್ರಧಾನಿ ಕಾರ್ಯದರ್ಶಿ ವಿರುದ್ಧ ತನಿಖೆ ನಡೆಸಬೇಕೆಂಧು ನಾಗರಿಕ ಹಕ್ಕು ಹೋರಾಟ ಸಮಿತಿಯು ತನ್ನ ದೂರಿನಲ್ಲಿ ಒತ್ತಾಯಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ನವ ಕರ್ನಾಟಕ ನಿರ್ಮಾಣದ ಯಾತ್ರೆಯ ಹೆಸರಿನಲ್ಲಿ ಕಳೆದ 15 ದಿನಗಳಿಂದ ರಾಜ್ಯದ ನಾನಾ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸರ್ಕಾರ ಸಾಧನೆಗಳನ್ನು ಪ್ರಚಾರ ಮಾಡಿದ್ದರು.

ಇದಕ್ಕೆ ಪ್ರತಿಪಕ್ಷಗಳು ತೀವ್ರ ತರಹನಾದ ಆಕ್ಷೇಪಗಳನ್ನು ವ್ಯಕ್ತಪಿಡಿಸಿದ್ದವು. ಸರ್ಕಾರದ ಸಾಧನೆಗಳ ಹೆಸರಿನಲ್ಲಿ ಸಿದ್ದರಾಮಯ್ಯ ಮುಂಬರುವ ಚುನಾವಣೆ ಪ್ರಚಾರಕ್ಕಾಗಿ ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕೆಗಳು ವ್ಯಕ್ತವಾಗಿದ್ದವು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bangaluru civil rights organization has lodged a complaint with ACB against CM Siddaramaiah for alleged misused Rs 129 crore, that has been spent on promoting government achievements over the last four years.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ