ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಮಾರಸ್ವಾಮಿ ಭೇಟಿ ಮಾಡಿದ ಕಿರಣ್‌ ಮಜುಂದಾರ್‌ ಶಾ ಚರ್ಚಿಸಿದ್ದೇನು?

By Nayana
|
Google Oneindia Kannada News

ಬೆಂಗಳೂರು, ಜುಲೈ 14: ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರು ನಗರದ ಟ್ರಾಫಿಕ್‌, ಸಮಸ್ಯೆ ರಸ್ತೆ ಅಭಿವೃದ್ಧಿ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಶುಕ್ರವಾರ ಭೇಟಿ ಮಾಡಿದರು.

ಬೆಂಗಳೂರು ನಗರ ಅಭಿವೃದ್ಧಿಗಾಗಿ ಜಾರಿಗೊಳಿಸುತ್ತಿರುವ ಯೋಜನೆ, ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ, ಜೈ ಭುವನೇಶ್ವರಿ ಎಂದ ಕಿರಣ್ ಮಜುಂದಾರ್ ಶಾನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ, ಜೈ ಭುವನೇಶ್ವರಿ ಎಂದ ಕಿರಣ್ ಮಜುಂದಾರ್ ಶಾ

ಶುಕ್ರವಾರ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಮತ್ತು ಬಿಪ್ಯಾಕ್ ಸ್ವಯಂ ಸೇವಾ ಸಂಸ್ಥೆಯೊಂದಿಗೆ ಬೆಂಗಳೂರು ನಗರ ಅಭಿವೃದ್ಧಿ ಕುರಿತು ಚರ್ಚಿಸಿದರು. ಬೆಂಗಳೂರು ನಗರ ಎದುರಿಸುತ್ತಿರುವ ಟ್ರಾಫಿಕ್ ಸಮಸ್ಯೆ, ರಸ್ತೆಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಕುರಿತು ಈ ಸಭೆಯಲ್ಲಿ ಚರ್ಚಿಸಲಾಯಿತು.

Complete Development Projects in time-bound manner: CM directs officers

ಉಪ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಪ್ರತಿ ತಿಂಗಳು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕುಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್, ಬಿಪ್ಯಾಕ್‍ನ ಸದಸ್ಯರು ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

English summary
Chief Minister H.D. Kumaraswamy today directed Officers to complete development projects in Bengaluru city in a time-bound manner. He discussed about the development of the city with Kiran Majumdar Shaw, Chaiman, Biocon and the members of B-PAC today at Krishna, his home office.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X