ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂವಿಧಾನವನ್ನು ಪ್ರಶ್ನಿಸುವ ಹಕ್ಕು ಕಾಂಗ್ರೆಸ್ಸಿಗಿಲ್ಲ: ಅನಂತ್ ಕುಮಾರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 24: "ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಪ್ರಶ್ನಿಸುವ ಹಕ್ಕು ಕಾಂಗ್ರೆಸ್ಸಿಗಿಲ್ಲ" ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಸಂವಿಧಾನ ಮತ್ತು ದಲಿತರ ಮೇಲೆ ನಡೆಯುತ್ತಿರುವ ದಾಳಿಯನ್ನು ವಿರೋಧಿಸಿ, ಕಾಂಗ್ರೆಸ್ ಪಕ್ಷ ಕರೆನೀಡಿದ 'ಸಂವಿಧಾನ ಉಳಿಸಿ' ಆಂದೋಲನಕ್ಕೆ ನಿನ್ನೆ(ಏ.23) ಚಾಲನೆ ದೊರಕಿದೆ.

'ಸಂವಿಧಾನ ಉಳಿಸಿ' ಕಾಂಗ್ರೆಸ್ ನ ಹೊಸ ನಾಟಕ ಎಂದ ಅಮಿತ್ ಶಾ!'ಸಂವಿಧಾನ ಉಳಿಸಿ' ಕಾಂಗ್ರೆಸ್ ನ ಹೊಸ ನಾಟಕ ಎಂದ ಅಮಿತ್ ಶಾ!

ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅನಂತ ಕುಮಾರ್, 'ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ಮಾತನಾಡುವ ಹಕ್ಕು ಕಾಮಗ್ರೆಸ್ಸಿಗಿಲ್ಲ. ಸ್ವಾತಂತ್ರ್ಯ ಸಿಕ್ಕು 70 ವರ್ಷವಾದರೂ ಅವರಿನ್ನೂ ಸಂವಿಧಾನವನ್ನು ಅರ್ಥಮಾಡಿಕೊಂಡಿಲ್ಲ' ಎಂದು ಅವರು ಕಾಂಗ್ರೆಸ್ಸಿಗರನ್ನು ತರಾಟೆಗೆ ತೆಗೆದುಕೊಂಡರು.

Congress has no right to question Constitution: Ananth Kumar

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಮಂಡಿಸಲಾಗಿದ್ದ ಮಹಾಭಿಯೋಗ(impeachment) ನಿಲುವಳಿಯವನ್ನು ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದು ಸರಿಯಾದ ನಡೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.

English summary
A day after Vice President and Rajya SabhaChairman M. Venkaiah Naidu rejected the impeachment motion against Chief Justice of India (CJI) Dipak Misra, Union Parliamentary Affairs Minister Ananth Kumar on Tuesday lashed out at the Congress stating that they have no right to question Constitution and democracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X