ಬಿಬಿಎಂಪಿ ಮೇಯರ್ ಚುನಾವಣೆ : ಜೆಡಿಎಸ್ ಬೆಂಬಲ ಯಾರಿಗೆ?

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 14 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ಬಗ್ಗೆ ಹಲವಾರು ಲೆಕ್ಕಾಚಾರಗಳು ನಡೆಯುತ್ತಿವೆ. ಸೆಪ್ಟೆಂಬರ್ 19ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಗೆ ಅಧಿಕಾರ ಪಡೆಯಲು ಜೆಡಿಎಸ್ ಬೆಂಬಲ ಅನಿವಾರ್ಯವಾಗಿದೆ.

ಸದ್ಯ, ಮೇಯರ್ ಆಗಿರುವ ಬಿ.ಎನ್.ಮಂಜುನಾಥ ರೆಡ್ಡಿ ಮತ್ತು ಉಪ ಮೇಯರ್ ಎಸ್.ಪಿ.ಹೇಮಲತಾ ಅವರ ಅಧಿಕಾರಾವಧಿ ಸೆಪ್ಟೆಂಬರ್ 14ರಂದು ಕೊನೆಗೊಳ್ಳಲಿದೆ. ಸೆ.18ರಂದು ಚುನಾವಣೆ ನಡೆಯಲಿದ್ದು, ಮೇಯರ್ ಪಟ್ಟ ಹಿಂದುಳಿದ ವರ್ಗ (ಬಿ) ಮಹಿಳೆ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ.[JDSಗೆ ಸೆಡ್ಡು ಹೊಡೆಯಲಿದ್ದಾರೆ ಭಿನ್ನಮತೀಯರು]

ಈಗಿರುವಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮುಂದುವರೆದರೆ ಪ್ರಕಾಶ್‌ನಗರ ವಾರ್ಡ್‌ನ ಕಾಂಗ್ರೆಸ್‌ ಸದಸ್ಯೆ ಜಿ. ಪದ್ಮಾವತಿ ಅವರು ಮೇಯರ್‌ ಆಗುವುದು ಖಚಿತ ಎಂಬ ಸುದ್ದಿ ಹಬ್ಬಿವೆ. 4ನೇ ಬಾರಿ ಸದಸ್ಯೆಯಾಗಿ ಆಯ್ಕೆಯಾಗಿರುವ ಅವರನ್ನು ಮೇಯರ್ ಮಾಡಲು ಪಕ್ಷದ ಮುಖಂಡರು ಬಯಸಿದ್ದಾರೆ ಎಂದು ತಿಳಿದುಬಂದಿದೆ.[ಬಿಬಿಎಂಪಿಯಲ್ಲಿ ಮೈತ್ರಿ ಮುರಿಯುವ ಮಾತನಾಡಿದ ಕುಮಾರಸ್ವಾಮಿ!]

ಬಿಬಿಎಂಪಿಯಲ್ಲಿ ಮೈತ್ರಿ ಮುಂದುವರೆಸುವ ಕುರಿತು ಶನಿವಾರ ಬೆಂಗಳೂರಿನಲ್ಲಿ ಮಾತನಾಡಿರುವ ಚಾಮರಾಜಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ಜಮೀರ್ ಅಹಮದ್ ಖಾನ್ ಅವರು, 'ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದಂತೆ ಕೇಳುತ್ತೇವೆ. ದೇವೇಗೌಡರ ಜೊತೆ ಮಾತನಾಡುವ ಹೊಣೆಯನ್ನು ಅವರಿಗೆ ನೀಡುತ್ತೇವೆ' ಎಂದು ಹೇಳಿದರು....

ಮೈತ್ರಿ ಮುಂದುವರೆಯುವುದು ಕಷ್ಟ

ಮೈತ್ರಿ ಮುಂದುವರೆಯುವುದು ಕಷ್ಟ

ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವಿನ ಬಾಂಧವ್ಯ ಈಗ ಸರಿಯಾಗಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಆರು ತಿಂಗಳ ಹಿಂದೆಯೇ ಮೈತ್ರಿ ಮುರಿಯುವ ಮಾತನಾಡಿದ್ದರು. ಸರಿಯಾಗಿ ಆಡಳಿತ ನಡೆಸಲು ಕಾಂಗ್ರೆಸ್ ವಿಫಲವಾಗಿದೆ ಎಂದು ಟೀಕಿಸಿದ್ದರು.

ಮೂವರು ಶಾಸಕರು ಅಮಾನತಾಗಿದ್ದಾರೆ

ಮೂವರು ಶಾಸಕರು ಅಮಾನತಾಗಿದ್ದಾರೆ

ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಮತ ಹಾಕಿದ ಕಾರಣಕ್ಕೆ ಶಾಸಕರಾದ ಜಮೀರ್‌ ಅಹಮದ್ ಖಾನ್, ಗೋಪಾಲಯ್ಯ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಬಿಬಿಎಂಪಿಯಲ್ಲಿರುವ ಜೆಡಿಎಸ್‌ನ 14 ಸದಸ್ಯರ ಪೈಕಿ ಎಂಟು ಸದಸ್ಯರು ಈ ಮೂವರು ಶಾಸಕರ ಬಲದಿಂದ ಗೆದ್ದವರು. 11 ಸದಸ್ಯರು ಈ ಶಾಸಕರ ಹಿಡಿತದಲ್ಲಿದ್ದಾರೆ.

'ಕುಮಾರಸ್ವಾಮಿ ಜೊತೆ ಚರ್ಚೆ ನೆಡೆಸಿ ತೀರ್ಮಾನ'

'ಕುಮಾರಸ್ವಾಮಿ ಜೊತೆ ಚರ್ಚೆ ನೆಡೆಸಿ ತೀರ್ಮಾನ'

'ಮೇಯರ್ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಬೇಕು ಎಂಬ ಬಗ್ಗೆ ಕುಮಾರಸ್ವಾಮಿ ಅವರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ' ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ. ಚುನಾವಣೆ ಸಂದರ್ಭದಲ್ಲಿ 14 ಸದಸ್ಯರಿಗೂ ವಿಪ್‌ ಜಾರಿ ಮಾಡಲಾಗುತ್ತದೆ.

ಬಿಜೆಪಿಗೆ ಜೆಡಿಎಸ್ ಬೆಂಬಲ

ಬಿಜೆಪಿಗೆ ಜೆಡಿಎಸ್ ಬೆಂಬಲ

ಬಿಬಿಎಂಪಿ ಮೇಯರ್ ಚುನಾವಣೆ ಕುರಿತು ಮಾತನಾಡಿರುವ ಬಿಜೆಪಿ ನಾಯಕ ಆರ್.ಅಶೋಕ್ ಅವರು, 'ಬಿಜೆಪಿ -ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿವೆ. ಈ ಬಗ್ಗೆ ದೇವೇಗೌಡ ಅವರೊಂದಿಗೆ ಅಂತಿಮ ಸುತ್ತಿನ ಮೈತ್ರಿ ಮಾತುಕತೆ ನಡೆಸುತ್ತೇವೆ. ಈಗಾಗಲೆ ಕುಮಾರಸ್ವಾಮಿ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದೇವೆ' ಎಂದು ಹೇಳಿದ್ದಾರೆ.

ಉಳಿದ ನಾಯಕರ ಅಪಸ್ವರ

ಉಳಿದ ನಾಯಕರ ಅಪಸ್ವರ

ಬಿಜೆಪಿಯಲ್ಲಿ ಬಿಬಿಎಂಪಿಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಆರ್.ಅಶೋಕ್ ಅವರು ಮಾತ್ರ ಒಲವು ಹೊಂದಿದ್ದಾರೆ. ಉಳಿದ ನಾಯಕರು ಮೈತ್ರಿ ಬೇಡವೆಂದು ಅಭಿಪ್ರಾಯಪಡುತ್ತಿದ್ದಾರೆ. ಆರ್‌ಎಸ್‌ಎಸ್‌ ಮುಖಂಡರು ಸಹ ಮೈತ್ರಿ ಬೇಡ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
JDS and Congress alliance in Bruhat Bengaluru Mahanagara Palike (BBMP) is facing test of time. BBMP mayoral election sheduled on Spetember 18, 2016.
Please Wait while comments are loading...