ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌ನಿಂದ ನಾರಾಯಣಸ್ವಾಮಿ ಉಚ್ಚಾಟನೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 20 : ಬಿಬಿಎಂಪಿ ಕಚೇರಿಯಲ್ಲಿ ದಾಂಧಲೆ ನಡೆಸಿ ಕಚೇರಿಯನ್ನು ಸುಡಲು ಯತ್ನಿಸಿದ ನಾರಾಯಣಸ್ವಾಮಿಯನ್ನು ಕಾಂಗ್ರೆಸ್ ಸರ್ಕಾರವು ಉಚ್ಚಾಟನೆ. ಮಾಧ್ಯಮ ವರದಿ ಪ್ರಸಾರವಾದ ನಂತರ ಪರಿಶೀಲಿಸಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್​ ಎರಚಿ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ನಾರಾಯಣಸ್ವಾಮಿ ಅವರನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೆ.ಆರ್‌.ಪುರಂ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿಕೆ.ಆರ್‌.ಪುರಂ ಕಾಂಗ್ರೆಸ್‌ ಮುಖಂಡನ ಗೂಂಡಾಗಿರಿ

ಅಷ್ಟೇ ಅಲ್ಲದೆ ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅವರನ್ನು ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ. ಫೆಬ್ರವರಿ 16 ರಂದು ಬಿಬಿಎಂಪಿ ಕಚೇರಿಗೆ ತೆರಳಿ ತಮ್ಮ ದರ್ಪವನ್ನು ಪ್ರದರ್ಶಿಸಿದ್ದರು. ನಾರಾಯಣಸ್ವಾಮಿ ಬಿಬಿಎಂಪಿ ಕಚೇರಿಯಲ್ಲಿ ಗೂಂಡಾಗಿರಿ ನಡೆಸಿದ ವೀಡಿಯೋ ಎಲ್ಲಾ ಸುದ್ದಿವಾಹಿನಿಗಳಲ್ಲಿ ಹರಿದಾಡಿದ್ದು ಈ ವಿಚಾರವಾಗಿ ಅವರದ್ದು ತಪ್ಪು ಎಂದಾದಲ್ಲಿ ಅವರನ್ನು ಬಂಧಿಸುವಂತೆ ಸಿದ್ದರಾಮಯ್ಯ ಸೂಚಿಸಿದ್ದಾರೆ.

Congress leader Narayanaswamy suspended from the party

ಅವಶ್ಯಕತೆ ಇದ್ದರೆ ನಾರಾಯಣಸ್ವಾಮಿ ಅವರನ್ನು ಬಂಧಿಸಿ, ಕೂಡಲೇ ಕಾನೂನು ರೀತಿ ಕ್ರಮ ತೆಗೆದುಕೊಳ್ಳಿ ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಕೆ.ಆರ್​.ಪುರಂ ಶಾಸಕ ಭೈರತಿ ಬಸವರಾಜ್​ ಬೆಂಬಲಿಗ ನಾರಾಯಣಸ್ವಾಮಿ ಕಳೆದ ಶುಕ್ರವಾರ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ಸಂದರ್ಭದಲ್ಲಿ ಕಚೇರಿಯಲ್ಲಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದರು.

English summary
Congress leader Narayanaswamy who assaulted the government officer has been suspended for from the party for 6 years. after the reported assault KPCC chairmen G.Parameshwar ordered for the suspension. Congress leader threw petrol inside premises of BBMP office threatening to set in on fire.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X