ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಶಾಸಕ ಸುಧಾಕರ್

By Manjunatha
|
Google Oneindia Kannada News

ಚಿಕ್ಕಬಳ್ಳಾಪುರ, ಜೂನ್ 29: ಸಚಿವ ಸ್ಥಾನ ಕೈತಪ್ಪಿದ ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಮತ್ತೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬಂದಿದ್ದ ಅವರು ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, 'ಕಾಂಗ್ರೆಸ್‌ನಲ್ಲಿ ಯುವ ಶಾಸಕರಿಗೆ ಆದ್ಯತೆ ನೀಡುತ್ತಿಲ್ಲ, ಕಾಂಗ್ರೆಸ್ ಹಳೆಯ ಪಕ್ಷ ಹಾಗೂ ಹಿರಿಯರ ಪಕ್ಷ ಆಗಿರುವ ಕಾರಣ ನನಗೆ ಅವಕಾಶ ಕೈತಪ್ಪಿತು' ಎಂದಿದ್ದಾರೆ.

ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!

'ನಾನು ಕಾಂಗ್ರೆಸ್‌ ಬದಲಿಗೆ ಜೆಡಿಎಸ್ ಪಕ್ಷದಲ್ಲಿ ಇದ್ದಿದ್ದರೆ ನಾನು ಕೇಳುವ ಮೊದಲೇ ನನಗೆ ಸಚಿವ ದೊರೆಯುತ್ತಿತ್ತು ಎಂದಿರುವ ಅವರು, ಪರೋಕ್ಷವಾಗಿ ಪಕ್ಷ ಬಿಡುವ ಸುಳಿವು ನೀಡಿದ್ದಾರೆ.

Congress MLA Sudhakar is unhappy with his party

ಕುಮಾರಸ್ವಾಮಿ ಅವರನ್ನು ಭೇಟಿಯಾದ ನಂತರ ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರನ್ನೂ ಭೇಟಿಯಾದ ಸುಧಾಕರ್ ಅವರು ಮಾತುಕತೆ ನಡೆಸಿದರು. ಸಚಿವ ಸ್ಥಾನಕ್ಕೆ ಪರಮೇಶ್ವರ್ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಬಜೆಟ್‌ಗೂ ಮುನ್ನಾ ಸಂಪುಟ ವಿಸ್ತರಣೆ, ಎಂಬಿ ಪಾಟೀಲ್‌ಗೆ ಸಚಿವ ಸ್ಥಾನ ಸಾಧ್ಯತೆಬಜೆಟ್‌ಗೂ ಮುನ್ನಾ ಸಂಪುಟ ವಿಸ್ತರಣೆ, ಎಂಬಿ ಪಾಟೀಲ್‌ಗೆ ಸಚಿವ ಸ್ಥಾನ ಸಾಧ್ಯತೆ

ಎಂಬಿ ಪಾಟೀಲ್ ನಾಯಕತ್ವದ ಅತೃಪ್ತ ಶಾಸಕರ ಬಣದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಅವರು, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರು ಸಭೆ ನಡೆಸಿದ ಬಳಿಕ ಸುಮ್ಮನಾಗಿದ್ದರು. ಆದರೆ ಈಗ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

ಮತ್ತೆ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಚಾಲನೆ ದೊರೆತಿದ್ದು ಎಂಬಿ ಪಾಟೀಲ್, ರಾಮಲಿಂಗಾರೆಡ್ಡಿ ಸೇರಿ ಕೆಲವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಹಾಗಾಗಿ ಈಗ ಸುಧಾಕರ್ ಅವರು ಮತ್ತೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.

English summary
Congress MLA Sudhakar said 'if he is in JDS he will became minister long ago'. He also said Congress is old party and seniors only get chance in this party. He is demanding minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X