ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಕೈ ಕಾರ್ಯಕರ್ತರು

By Manjunatha
|
Google Oneindia Kannada News

Recommended Video

Bharat Bandh : ಬೊಮ್ಮನಹಳ್ಳಿಯಲ್ಲಿ ಆಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟ ಕಾರ್ಯಕರ್ತರು | Oneindia Kannada

ಬೆಂಗಳೂರು, ಸೆಪ್ಟೆಂಬರ್ 10: ಇಂಧನ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುವ ಜೊತೆಗೆ ಮಾನವೀಯ ಕಾರ್ಯವನ್ನೂ ನಗರದಲ್ಲಿ ಮಾಡಿದ್ದಾರೆ.

ಇಂದು ಬೆಳಿಗ್ಗೆ ನಗರದ ಬೊಮ್ಮನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯರ್ತರು ಇಂಧನ ಬೆಲೆ ಏರಿಕೆ ವಿರುದ್ಧ ರಸ್ತೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು.

ಬೋಳಂಗಡಿಯಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿನ ಮೇಲೆ ಕಲ್ಲು ತೂರಾಟಬೋಳಂಗಡಿಯಲ್ಲಿ ಶಾಸಕ ರಾಜೇಶ್ ನಾಯಕ್ ಕಾರಿನ ಮೇಲೆ ಕಲ್ಲು ತೂರಾಟ

ಇದೇ ಸಂದರ್ಭದಲ್ಲಿ ರೋಗಿಯೊಬ್ಬರು ಇದ್ದ ಆಂಬುಲೆನ್ಸ್‌ ಒಂದು ಟ್ರಾಫಿಕ್‌ ಜಾಮ್ ಒಳಗೆ ಸಿಕ್ಕಿಹಾಕಿಕೊಂಡಿತ್ತು. ಕೇಂದ್ರದ ವಿರುದ್ಧ ಘೋಷಣೆ ಕೂಗುವುದರಲ್ಲಿ ನಿರತರಾಗಿದ್ದ ಕಾರ್ಯಕರ್ತರು ಕೂಡಲೇ ಧಾವಿಸಿ ವಾಹನಗಳನ್ನು ಕ್ಲಿಯರ್ ಮಾಡಿಸಿ ಆಂಬುಲೆನ್ಸ್‌ಗೆ ದಾರಿ ಬಿಡಿಸಿಕೊಟ್ಟರು.

Congress protesters make way for Ambulance

ಭಾರತ್ ಬಂದ್ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡ ಮಗುಭಾರತ್ ಬಂದ್ ಗಲಾಟೆಯಲ್ಲಿ ಪ್ರಾಣ ಕಳೆದುಕೊಂಡ ಮಗು

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷವು ಭಾರತ್ ಬಂದ್‌ಗೆ ಕರೆ ನೀಡಿದ್ದು. ಬೆಂಗಳೂರಿನಲ್ಲಿ ಸಹ ಉತ್ತಮ ಪ್ರತಿಕ್ರಿಯೆಯೇ ವ್ಯಕ್ತವಾಗಿದೆ. ಬಸ್‌ಗಳ ಓಡಾಟ ಸ್ಥಗಿತಗೊಂಡಿದೆ. ಟ್ಯಾಕ್ಸಿ, ಆಟೋ ಸಂಘಗಳೂ ಕೂಡ ಬಂದ್‌ಗೆ ಬೆಂಬಲ ನೀಡಿವೆ.

English summary
Congress party workers who were protesting in Bengaluru's Bommanhalli against central government made way for an Ambulance which was stuck between terrible traffic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X