ಡಿಕೆಶಿ ಮನೆ ಮೇಲೆ ಐಟಿ ದಾಳಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Posted By: Gururaj
Subscribe to Oneindia Kannada

ಬೆಂಗಳೂರು, ಆ.3 : ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಸಚಿವರ ಮನೆಯಲ್ಲಿ ಅಧಿಕಾರಿಗಳ ಪರಿಶೀಲನೆ ಇನ್ನು ಮುಂದುವರೆದಿದೆ.

ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Congress stages protest against IT raid on minister DK Shivakumar

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನೀತಿಯನ್ನು ಖಂಡಿಸಿದ ಕಾರ್ಯಕರ್ತರು. ರಾಜಕೀಯ ಕಾರಣಕ್ಕಾಗಿ ಇಂಧನ ಸಚಿವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು.

ಐಟಿ ದಾಳಿ : ಡಿಕೆಶಿ ಮನೆಯಲ್ಲಿ 2ನೇ ದಿನವೂ ಪರಿಶೀಲನೆ

ಸಿದ್ದರಾಮಯ್ಯ, ಪರಮೇಶ್ವರ ಭೇಟಿ : ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಭೇಟಿಯಾಗಿ ಚರ್ಚೆ ನಡೆಸಿದರು.

ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಕೇಂದ್ರ ವಿರುದ್ಧ ಪ್ರತಿಭಟನೆ ನಡೆಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

IT Raid Karnataka Power Minister DK Shivakumar Residence And Eagle ton Resort | Oneindia Kannada

ಡಿಕೆ ಶಿವಕುಮಾರ್ ಆಪ್ತರಿಗೆ ಮತ್ತಷ್ಟು ಐಟಿ ಶಾಕ್

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Congress leaders and workers on Thursday, August 3, 2017 staged a protest in Bengaluru against the Income Tax department raid on residence of Karnataka power minister DK Shivakumar.
Please Wait while comments are loading...